Breaking News

ಜಾತಿ ನಿಂದನೆ ಆರೋಪದಡಿ ವಕೀಲ ಕೆ.ಎನ್​​​. ಜಗದೀಶ್​​​​ ಬಂಧನ

Spread the love

ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಬಿಗ್​ಬಾಸ್​​​ ಮಾಜಿ ಸ್ಪರ್ಧಿ, ವಕೀಲ ಕೆ.ಎನ್​. ಜಗದೀಶ್​​ ಅವರನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ್​​ ಎಂಬುವವರು ನೀಡಿದ ದೂರಿನನ್ವಯ ಎಫ್​ಐಆರ್​​ ದಾಖಲಿಸಿಕೊಳ್ಳಲಾಗಿದ್ದು, ಜಗದೀಶ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ‌ ಜಾಲತಾಣದ ಮೂಲಕ ಜಾತಿ ನಿಂದನೆ ಮಾಡಿರುವ ಆರೋಪ ಜಗದೀಶ್ ಅವರ ವಿರುದ್ಧ ಕೇಳಿ ಬಂದಿತ್ತು. ಅದರನ್ವಯ ಜಗದೀಶ್ ಅವರಿಗೆ ಗುರುವಾರ ನೋಟಿಸ್ ನೀಡಲು ಪೊಲೀಸರು ತೆರಳಿದ್ದಾಗ ಮನೆಯ ಬಾಗಿಲು ತೆರೆಯದೇ ಹೈಡ್ರಾಮಾ ಮಾಡಿದ್ದರು.

ಇನ್ನು ಶುಕ್ರವಾರ ಬಂಧನಕ್ಕೊಳಗಾಗುವ ಮುನ್ನ ಫೇಸ್​​ಬುಕ್​​ ಮೂಲಕ ವಿಡಿಯೋ ಪ್ರಕಟಿಸಿರುವ ಜಗದೀಶ್​ ಅವರು, ‘ಇದೊಂದು ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಯಾರೂ ಅಶಾಂತಿಯುಂಟು ಮಾಡಬೇಡಿ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಜಗದೀಶ್​ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಸದಾ ಒಂದಿಲ್ಲೊಂದು ವಿಚಾರಗಳಿಗೆ ತಮ್ಮ ಪ್ರತಿಕ್ರಿಯೆ ಮೂಲಕ ಸುದ್ದಿಯಾಗುವ ಜಗದೀಶ್, ಕಿರುತೆರೆಯ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ