Breaking News

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ
“ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ ಸಾಮಗ್ರಿಗಳು, ಗೃಹ ಅಲಂಕಾರ ಮತ್ತು ಪೀಠೋಪಕರಣಗಳ ಬೃಹತ್ ವಸ್ತು ಪ್ರದರ್ಶನವನ್ನು‌ ಇಂದು ಉದ್ಘಾಟಿಸಲಾಯಿತು.
ಕಟ್ಟಡ ನಿರ್ಮಾಣ ಕ್ಷೇತ್ರದ ನವೀನ ತಂತ್ರಜ್ಞಾನಗಳು, ಆಧುನಿಕ ವಸ್ತುಗಳು ಮತ್ತು ಉಪಕರಣಗಳನ್ನು ಒಟ್ಟುಗೂಡಿಸಿದ ಈ ಪ್ರದರ್ಶನದಲ್ಲಿ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ, ಅಲ್ಲಿ ಪ್ರದರ್ಶಿಸಲಾದ ತಂತ್ರಜ್ಞಾನಗಳನ್ನು ಅವಲೋಕಿಸಿದೆ.
ಇಂತಹ ಪ್ರದರ್ಶನಗಳು ನಮ್ಮ ಇಂಜಿನಿಯರ್‌ಗಳು, ತಂತ್ರಜ್ಞರು ಹಾಗೂ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿರುವ ಯುವ ಉದ್ಯಮಿಗಳಿಗೆ ಪ್ರೇರಣೆ ನೀಡುವುದರೊಂದಿಗೆ, ಗೋಕಾಕ ನಗರದ ಸಮಗ್ರ ಅಭಿವೃದ್ಧಿಗೆ ಹೊಸ ದಿಕ್ಕು ತೋರಿಸಲಿವೆ ಎಂದು ಆಯೋಜಕರಿಂದ ಸನ್ಮಾನ ಸ್ವೀಕರಿಸಿ, ಮಾತನಾಡಿದೆ. ‌
ಈ ವೇಳೆ ಗೋಕಾಕಿನ ಶೂನ್ಯ ಸಂಪಾದನಾ ಮಠದ ಕಿರಿಯ ಸ್ವಾಮಿಗಳು ಶ್ರೀ ಬಸವ ಪ್ರಭು ಶ್ರೀಗಳು, ಅಸೋಸಿಯೇಷನ್ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ