Breaking News

ಗೌರಿ – ಗಣೇಶ ಹಬ್ಬ; ಕೆಎಸ್ಆರ್‌ಟಿಸಿಯಿಂದ ಹೆಚ್ಚುವರಿ ಬಸ್ ಸೇವೆ

Spread the love

ಬೆಂಗಳೂರು : ಸುದೀರ್ಘ ರಜೆ, ಗೌರಿ – ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಊರುಗಳತ್ತ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್ 25 ರಿಂದ 31ರವರೆಗೆ ಹೆಚ್ಚುವರಿ ವಿಶೇಷ ಬಸ್​ಗಳ ವ್ಯವಸ್ಥೆಯನ್ನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್‌ಟಿಸಿ) ಕಲ್ಪಿಸಿದೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ಅಂತರ್ ರಾಜ್ಯಗಳ ವಿವಿಧ ಸ್ಥಳಗಳಿಗೆ ಒಟ್ಟು 1500 ಬಸ್​ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕೆಎಸ್​ಆರ್​​ಟಿಸಿ ತಿಳಿಸಿದೆ.

ಬೆಂಗಳೂರು, ಮಂಗಳೂರು, ಮುಂಬೈ, ಪುಣೆ, ಗೋವಾ ಮತ್ತಿತರ ಕಡೆಗಳಿಗೆ ತೆರಳುವವರು ವಾಪಸ್​ ಆಗಲು ಆಗಸ್ಟ್ 27ರಿಂದ 31ರವರೆಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್‌‌ಗಳಿಗೆ ವಿಶೇಷ ಬಸ್​ಗಳ ವ್ಯವಸ್ಥೆಯಿದೆ.

ಅದೇ ರೀತಿ ಮೈಸೂರು ರಸ್ತೆಯ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗಕ್ಕೆ ಬಸ್‌ಗಳು ತೆರಳಲಿವೆ. ಇನ್ನು ಮಧುರೈ, ಕುಂಭಕೋಣಂ, ಚೆನ್ನೈ, ಕೊಯಿಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕ್ಕೋಡ್, ಕಲ್ಲಿಕೋಟೆ ಮಾರ್ಗದ ಬಸ್‌ಗಳು ಶಾಂತಿನಗರದ ನಿಲ್ದಾಣದಿಂದ ತೆರಳಲಿವೆ.

ಟಿಕೆಟ್ ರಿಯಾಯಿತಿ : 4 ಅಥವಾ ಅದಕ್ಕಿಂತ ಹೆಚ್ಚಿನ ಪ್ರಯಾಣಿಕರು ಒಟ್ಟಿಗೆ ಮುಂಗಡ ಟಿಕೆಟ್ ಬುಕ್ ಮಾಡಿದರೆ 5% ರಷ್ಟು ರಿಯಾಯಿತಿ ನೀಡಲಾಗುತ್ತದೆ. ಮತ್ತು ತೆರಳುವ ಹಾಗೂ ವಾಪಾಸ್ ಬರುವ ಟಿಕೆಟ್‌ನ್ನ ಒಟ್ಟಿಗೆ ಬುಕ್ ಮಾಡಿದರೆ, ವಾಪಾಸ್ ಬರುವ ಪ್ರಯಾಣದ ದರದಲ್ಲಿ 10% ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್ಆರ್‌ಟಿಸಿ ತಿಳಿಸಿದೆ.


Spread the love

About Laxminews 24x7

Check Also

ಲಕ್ಕಿ ಸ್ಕೀಮ್ ಹೆಸರಲ್ಲಿ ಜನರಿಗೆ ನಂಬಿಸಿ ₹14 ಕೋಟಿಗೂ ಅಧಿಕ ವಂಚನೆ: ನಾಲ್ವರ ಬಂಧನ

Spread the loveಮಂಗಳೂರು: ಲಕ್ಕಿ ಸ್ಕೀಮ್ ಮೂಲಕ ಗ್ರಾಹಕರಿಂದ ಕೋಟ್ಯಂತರ ರೂ. ಸಂಗ್ರಹಿಸಿ ವಂಚನೆ ಮಾಡಿದ ಎರಡು ಸಂಸ್ಥೆಗಳ ನಾಲ್ವರು ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ