ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ.
ಬೆಂಗಳೂರು : ಇಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ 11 ಮಂದಿ ವಿಧಾನಸಭಾ ಸದಸ್ಯರೊಂದಿಗೆ ಬಿಹಾರ ರಾಜ್ಯಕ್ಕೆ ಪ್ರಯಾಣ ಬೆಳೆಸಿದರು.
ಈ ತಂಡದಲ್ಲಿ ಸುರಪುರ ಮತಕ್ಷೇತ್ರದ ಶಾಸಕರಾದ ರಾಜಾ ವೇಣುಗೋಪಾಲ ನಾಯಕ ಕೂಡ ಸೇರಿದ್ದಾರೆ.
ವಿರೋಧ ಪಕ್ಷದ ನಾಯಕರಾದ ರಾಹುಲ ಗಾಂಧಿ ಅವರ ನೇತೃತ್ವದಲ್ಲಿ ನಡೆಯಲಿರುವ **‘ವೋಟರ್ ಅಧಿಕಾರ ಯಾತ್ರೆ’**ಯಲ್ಲಿ ಭಾಗವಹಿಸಲು ಈ ಪ್ರಯಾಣ ಕೈಗೊಳ್ಳಲಾಗಿದೆ.