Breaking News

ತುಮಕೂರು: ಮುಂಬೈ ಮಾದರಿ ಗಣಪತಿ ವಿಗ್ರಹಗಳಿಗೆ ಹೆಚ್ಚು ಬೇಡಿಕೆ

Spread the love

ತುಮಕೂರು: 2025ರ ಚೌತಿ ಬಂದೇ ಬಿಡ್ತು. ಭಕ್ತರು ವಿಭಿನ್ನ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಮುಂಬೈ ಮಾದರಿಯ ಗಣೇಶ ಮೂರ್ತಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಪೇಟ ತೊಟ್ಟಿರುವ ಗಣಪತಿ ವಿಗ್ರಹ, ಆಸ್ಥಾನದಲ್ಲಿ ಕುಳಿತ ಭಂಗಿಯ ಗಣೇಶ, ಕೈ ಎತ್ತಿ ನೃತ್ಯ ಮಾಡುವ ಗಣೇಶನ ಮೂರ್ತಿಗಳನ್ನು ಮಾರಾಟಕ್ಕಿಡಲಾಗಿದೆ.

ಮೂರ್ತಿಗಳಿಗೆ ನೈಸರ್ಗಿಕ ಬಣ್ಣಗಳನ್ನು ಬಳಸುತ್ತಿರುವುದು ಗಮನಿಸಬೇಕಾದ ಅಂಶ. ಈ ಮೊದಲು ಆಯಿಲ್‌ ಪೈಂಟ್​ಗಳನ್ನು ಬಳಸಲಾಗುತ್ತಿತ್ತು. ಇದರಿಂದ ವಿಸರ್ಜನೆ ವೇಳೆ ಕೆರೆ ನೀರು ಕಲುಷಿತಗೊಳ್ಳುತ್ತಿತ್ತು. ಇದನ್ನು ಮನಗಂಡಿರುವ ತಯಾರಕರು ಸ್ವಯಂಪ್ರೇರಿತರಾಗಿ ನೈಸರ್ಗಿಕ ಬಣ್ಣಗಳನ್ನು ಬಳಸುತ್ತಿದ್ದಾರೆ. ಹೀಗಾಗಿ, ವಿಗ್ರಹಗಳು ಸುಂದರವಾಗಿ ಕಾಣುತ್ತಿವೆ ಎನ್ನುತ್ತಾರೆ ವಿಗ್ರಹ ತಯಾರಕರು ಮತ್ತು ಮಾರಾಟಗಾರರು.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ