Breaking News
Transparent umbrella under heavy rain against water drops splash background. Rainy weather concept.

ರಾಜ್ಯಾದ್ಯಂತ ಆ.27ರಿಂದ ಮತ್ತೆ ಮಳೆ

Spread the love

ಬೆಂಗಳೂರು: ರಾಜ್ಯಾದ್ಯಂತ ಆ.27ರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿರುವ ಇಲಾಖೆ, ಸೆ.1ರ ವರೆಗೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ವಿಜಯನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಕ್ಯಾಸಲ್​​ ರಾಕ್, ಕದ್ರಾದಲ್ಲಿ ಸೋಮವಾರ ಮಳೆಯಾಗಿದ್ದು, ಉಳಿದೆಡೆ ಒಣಹವೆ ಇತ್ತು.

ಬೆಂಗಳೂರಲ್ಲಿ ಹೇಗಿದೆ ವಾತಾವರಣ?: ಬೆಂಗಳೂರು ನಗರದಲ್ಲಿಂದು 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಇದ್ದರೆ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇದೆ. ಹೆಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಇರಲಿದ್ದು, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇರಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಉಕ್ಕಿ ಹರಿಯುತ್ತಿವೆ ಉತ್ತರದ ನದಿಗಳು: ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿದಿದೆ. ಪರಿಣಾಮ ಉತ್ತರ ಪ್ರದೇಶದಲ್ಲಿ ನದಿಗಳು ಇನ್ನೂ ಉಕ್ಕಿ ಹರಿಯುತ್ತಿವೆ. ಪ್ರಯಾಗ್‌ರಾಜ್‌ನಲ್ಲಿ, ಈ ವರ್ಷ ನಾಲ್ಕನೇ ಬಾರಿಗೆ ಗಂಗಾ-ಯಮುನಾ ನದಿಗಳ ನೀರು ಬಡಿ ಹನುಮಾನ್ ಮಂದಿರವನ್ನು ಪ್ರವೇಶಿಸಿದೆ. ಆಗ್ರಾದಲ್ಲಿ ಚಂಬಲ್ ಹಾಗೂ ಯಮುನಾ ನದಿಯ ನೀರಿನ ಮಟ್ಟ ಕಡಿಮೆಯಾಗಿದ್ದು, ಸ್ಥಳೀಯರು ನಿಟ್ಟಿಸಿರು ಬಿಟ್ಟಿದ್ದಾರೆ. ಆದರೆ, ಬನಾರಸ್‌ನಲ್ಲಿ ನಿರಂತರ ಮಳೆಯ ಪರಿಣಾಮ ಗಂಗಾ ನದಿಯ ನೀರಿನ ಮಟ್ಟ ಹೆಚ್ಚಾಗುತ್ತಿರುಬುದು ಆತಂಕ ತರಿಸಿದೆ. ಗಂಗಾ ನದಿಯ ನೀರಿನ ಮಟ್ಟ ಸುಮಾರು 68 ಮೀಟರ್ ದಾಟಿದ್ದರಿಂದ ಮಣಿಕರ್ಣಿಕಾ ಸೇರಿದಂತೆ ಹರಿಶ್ಚಂದ್ರ ಘಾಟ್‌ನ ಕೆಳಗಿನ ಭಾಗವೂ ನೀರಿನಲ್ಲಿ ಮುಳುಗಿದೆ. ಇದರಿಂದಾಗಿ ಅಂತ್ಯಕ್ರಿಯೆಗೆ ಕಷ್ಟವಾಗುತ್ತಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ