Breaking News

ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ. ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ ನಾನು ಒಂದು ವೇಳೆ ತಪ್ಪು ಮಾಡಿದ್ದೇ ಆದ್ರೇ ಕ್ಷಮೆ ಯಾಚಿಸುತ್ತೇನೆ

Spread the love

ಆರ್.ಎಸ್.ಎಸ್. ಗೀತೆ ಹಾಡಿದ ಡಿಸಿಎಂ ಡಿಕೆಶಿ ಕ್ಷಮೆ ಯಾಚನೆ
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು
ಆರ್.ಎಸ್.ಎಸ್. ಗೀತೆ ಹಾಡಿದ ಡಿಸಿಎಂ ಡಿಕೆಶಿ ಕ್ಷಮೆ ಯಾಚನೆ
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು
ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ. ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ
ನಾನು ಒಂದು ವೇಳೆ ತಪ್ಪು ಮಾಡಿದ್ದೇ ಆದ್ರೇ ಕ್ಷಮೆ ಯಾಚಿಸುತ್ತೇನೆ
‘ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ. ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು’ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ತಿರುಗೇಟು ನೀಡಿದರು.
ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ. ವಿರೋಧ ಪಕ್ಷದ ಸಿದ್ಧಾಂತದ ಅರಿವಿದೆ ಎಂಬುದನ್ನು ನಿರೂಪಿಸಿವುದಕ್ಕಾಗಿ ಹಾಗೆ ಹೇಳಿದೆ ಅಷ್ಟೆ. ಆದರೂ, ಒಂದು ವೇಳೆ ತಪ್ಪು ಮಾಡಿದ್ದೇನೆ ಎಂದು ನೀವು ಭಾವಿಸುವುದೇ ಆದರೆ, ಎಲ್ಲ ಕಾಂಗ್ರೆಸ್ ನಾಯಕರ-ಕಾರ್ಯಕರ್ತರ, ಇಂಡಿ ಒಕ್ಕೂಟದ ನಾಯಕರ ಕ್ಷಮೆ ಕೇಳುತ್ತೇನೆ ಎಂದರು.
ವಿಧಾನಸಭೆಯಲ್ಲಿ ಆಚಾರ ವಿಚಾರಗಳನ್ನು ಪಾಲನೆ ಮಾಡಿಕೊಂಡು ಬಂದಿದ್ದೇನೆ. ವಿದ್ಯಾರ್ಥಿ ಸಂಘಟನೆಯಲ್ಲಿಂದಲೇ ಗುರುತಿಸಿಕೊಂಡು ಬಂದಿದ್ದೇನೆ. ಹೊಸದಾಗಿ ಕಾಂಗ್ರೆಸ್ ಸೇರಿಲ್ಲ, ಯಾರ ಪಾಠವೂ ಅಗತ್ಯವಿಲ್ಲ. ನನಗೂ ಗಾಂಧಿ ಕುಟುಂಬಕ್ಕೂ ಭಕ್ತ ಭಗವಂತನ ನಡುವಿರುವ ಸಂಬಂಧ.
ನಾನು ಎಂಎ ಪೊಲೀಟಿಕಲ್ ವಿದ್ಯಾರ್ಥಿ. ರಾಜಕಾರಣಕ್ಕೆ ಬರೋದಕ್ಕಿಂತಲೂ ಮುನ್ನ ಎಲ್ಲಾ ಪಕ್ಷಗಳ ಅಧ್ಯಯನ ಮಾಡಿದ್ದೇನೆ. ಕಮ್ಯೂನಿಸಂ, ಬಿಜೆಪಿ, ಆರ್ಎಸ್ಎಸ್, ದಳ ಎಲ್ಲ ಪಕ್ಷಗಳ ಬಗ್ಗೆ ತಿಳಿದಿದ್ದೇನೆ. ಮುಸ್ಲಿಂ ಲೀಗ್ ಸಮಾವೇಶದಲ್ಲೂ ಭಾಗಿಯಾಗಿದ್ದೆ. ಅವರ ಶಿಸ್ತಿಗೆ ಬೆರೆಗಾಗಿದ್ದೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಅಲ್ಲದೆ, ಬೇಕಾದರೆ ಕ್ಷಮೆ ಕೇಳೋಣ. ಬಿಕೆ ಹರಿಪ್ರಸಾದ್ಗೂ ಕ್ಷಮೆ ಕೇಳೋಣ ಎಂದರು.
‘ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ. ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು’ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ತಿರುಗೇಟು ನೀಡಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ