Breaking News

ಡಿ.ಕೆ.ಶಿವಕುಮಾರ್​ಗೆ ಕ್ಷಮೆ ಕೇಳಲು ಆದೇಶಿಸಿದ್ದು ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರಾ? : ಅಶೋಕ್

Spread the love

ಬೆಂಗಳೂರು: “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿ‌.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಆರ್​ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೇಯ ಸಾಲಿನ ಸಾರಾಂಶ ಇಷ್ಟೇ. “ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು.” ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ? ಎಂದು ಪ್ರಶ್ನೆ ಮಾಡಿದ್ದಾರೆ.

ಒಂದು ಕಡೆ ವಿಧಾನಸೌಧದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದವರನ್ನು ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಇಷ್ಟಕ್ಕೂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿ ಅವರಾ? ರಾಹುಲ್ ಗಾಂಧಿ ಅವರಾ?. ಕೆ.ಸಿ.ವೇಣುಗೋಪಾಲ್ ಅವರಾ? ಸುರ್ಜೆವಾಲಾ ಅವರಾ? ಅಥವಾ ಬಿ.ಕೆ.ಹರಿಪ್ರಸಾದ್ ಅವರು ಹೇಳಿದ್ದಕ್ಕೆ ಕ್ಷಮೆ ಕೇಳಿದರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು. “ತನ್ನ ಮಾತೃಭೂಮಿಯನ್ನು ಪ್ರೀತಿಸದವನು ಏನನ್ನೂ ಪ್ರೀತಿಸಲಾರ” ಎನ್ನುವ ಮಾತಿದೆ ಎಂದು ಕುಟುಕಿದ್ದಾರೆ.

ಆದರೆ ಕಾಂಗ್ರೆಸ್ ಪಕ್ಷದಲ್ಲಿ “ಕುರ್ಚಿಯ ಮೇಲೆ ಪ್ರೀತಿ ಇದ್ದರೆ ದೇಶಪ್ರೇಮವನ್ನು ಬಿಡಬೇಕು” ಎನ್ನುವ ಪರಿಸ್ಥಿತಿ ಇದೆ. ಅಧಿಕಾರದ ಮೇಲಿನ ವ್ಯಾಮೋಹಕ್ಕೆ, ಜನ್ಮ ಕೊಟ್ಟ ತಾಯ್ನೆಲವನ್ನೇ ಬಿಟ್ಟುಕೊಡುವ so-called ನಾಯಕರು ನಾಡಿನ ಮುಖ್ಯಮಂತ್ರಿಗಳಾಗಲು ಹೊರಟಿರುವುದು ನಮ್ಮ ನಾಡಿನ ಸದ್ಯದ ದೊಡ್ಡ ದುರಂತ ಎಂದಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ