Breaking News

ಹುಬ್ಬಳ್ಳಿಯಲ್ಲಿ ಅ.1 ರಿಂದ ಗದಗ ರಸ್ತೆ ಫ್ಲೈಓವರ್ ಕಾಮಗಾರಿ ಶುರು: ತಹಶೀಲ್ದಾರ್, ಪೊಲೀಸ್ ಠಾಣೆ ಸೇರಿ ಯಾವೆಲ್ಲ ಕಟ್ಟಡಗಳು ತೆರವು?

Spread the love

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿ ‌ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಕೆಲ ತಿಂಗಳ ಕಾಲ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ಬಂದ್ ಮಾಡಿ ಬಸವೇಶ್ವರ ಸರ್ಕಲ್‌ನಿಂದ ಹಳೇ ಕೋರ್ಟ್ ‌ವೃತ್ತದವರೆಗೆ ಕಾಮಗಾರಿ‌ ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲಾಡಳಿತ ಕೂಡ ಮಾರ್ಗ ಬದಲಾವಣೆ ಮಾಡಿ ಕಾಮಗಾರಿಯ ವೇಗವನ್ನು ಹೆಚ್ಚಿಸುವ ಪ್ರಯತ್ನ ಮಾಡಿತ್ತು‌. ಆದ್ರೂ ಕೂಡ ನಿರೀಕ್ಷಿತ ಮಟ್ಟದಲ್ಲಿ ಕಾಮಗಾರಿ ನಡೆಯುತ್ತಿಲ್ಲ.

ಇದರ ಮಧ್ಯೆಯೇ ಈಗ ಅಕ್ಟೋಬರ್ 1 ರಿಂದ ಗದಗ ರಸ್ತೆಯಲ್ಲಿ ಕಾಮಗಾರಿಗೆ ಚಾಲನೆ ಸಿಗಲಿದೆ. ಮೊದಲ ಹಂತದಲ್ಲಿ ವಿಜಯಪುರ ಮಾರ್ಗ ತೆಗೆದುಕೊಳ್ಳಲಾಗಿದೆ. ಹುಬ್ಬಳ್ಳಿಯಲ್ಲಿ ಇಕ್ಕಟ್ಟಾದ ರಸ್ತೆ ಇರುವುದರಿಂದ ರಸ್ತೆ ಸಂಚಾರಕ್ಕೆ ಅಡೆತಗಡೆಯಾಗುತ್ತದೆ. ಹೀಗಾಗಿ‌ ಹಂತ ಹಂತವಾಗಿ ಕಾಮಗಾರಿ ನಡೆಸುವ ಇಂಗಿತವನ್ನು ಜಿಲ್ಲಾಡಳಿತ ಹೊಂದಿದೆ.

3.9 ಕಿ.ಮೀ. ಉದ್ದದ ಮೇಲ್ಸೇತುವೆ: ಸುಮಾರು 3.9 ಕಿ.ಮೀ. ಉದ್ದದ ಮೇಲ್ಸೇತುವೆ ಕಾಮಗಾರಿಗಾಗಿ ಸಿದ್ದಪ್ಪ ಕಂಬಳಿ ರಸ್ತೆಯ ಪಕ್ಕದಲ್ಲಿರುವ ಉಪನಗರ ಪೊಲೀಸ್ ಠಾಣೆ ಕಟ್ಟಡ ಭಾಗಶಃ ತೆರವು ಆಗಲಿದೆ. ಕಟ್ಟಡದಲ್ಲಿರುವ ಕಚೇರಿಗಳ ಸ್ಥಳಾಂತರಕ್ಕೆ ಸೂಕ್ತ ಜಾಗದ ಹುಡುಕಾಟ ನಡೆದಿದೆ. ಇನ್ನು ಮೇಲ್ಸೇತುವೆ ಕಾಮಗಾರಿಗೆ ರಸ್ತೆ ಮಧ್ಯದಿಂದ ಅಕ್ಕಪಕ್ಕ 18.5 ಮೀಟರ್ ಜಾಗ ಸ್ವಾಧೀನವಾಗಲಿದೆ. ಚನ್ನಮ್ಮ ವೃತ್ತದಿಂದ ಅಶೋಕಾ ಟವ‌ರ್ ಹೋಟೆಲ್​​ವರೆಗಿನ 370 ಮೀಟರ್ ರಸ್ತೆಯ ಅಕ್ಕಪಕ್ಕ ಸರ್ಕಾರಿ ಮತ್ತು ಖಾಸಗಿಯ ಸಾಕಷ್ಟು ಆಸ್ತಿಗಳಿವೆ. ಅವುಗಳಲ್ಲಿ ಈ ಉಪನಗರ ಪೊಲೀಸ್ ಠಾಣೆ ಕಟ್ಟಡವೂ ಒಂದು. ರಸ್ತೆ ಮಧ್ಯದಿಂದ 3.6 ಮೀಟರ್ ಠಾಣೆಯ ಕಟ್ಟಡ ತೆರವು ಆಗಲಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಟ್ಟಡಕ್ಕೆ ಗುರುತುಹಾಕಿದೆ.

2006ರಲ್ಲಿ ನಿರ್ಮಿತ 3 ಮಹಡಿಯ ಉಪನಗರ ಠಾಣೆ ಕಟ್ಟಡದಲ್ಲಿ ಪೊಲೀಸ್ ಕಮಿಷನರ್, ಡಿಸಿಪಿ (ಕಾನೂನು) ಮತ್ತು ಎಸಿಪಿ ಕಚೇರಿ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಸಂಚಾರ ನಿಯಂತ್ರಣ ಕೊಠಡಿ ಹಾಗೂ ಮಹಿಳಾ ಪೊಲೀಸ್ ಠಾಣೆ ಇವೆ. ಕಟ್ಟಡದ ಶೇ. 30ರಷ್ಟು ಭಾಗ ತೆರವು ಆಗಲಿದೆ. ಇದರಿಂದ ತೆರವು ವೇಳೆ ಸುರಕ್ಷತೆ ದೃಷ್ಟಿಯಿಂದ ಸಿಬ್ಬಂದಿ ಅಲ್ಲಿ ಕಾರ್ಯ ನಿರ್ವಹಿಸುವುದು ಆಪಾಯ. ಅದಕ್ಕೂ ಮುನ್ನವೇ ಕಚೇರಿಗಳ ಸ್ಥಳಾಂತರ ಇಲಾಖೆಗೆ ಸವಾಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ