Breaking News

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಸಿಎ 2ನೇ ಹಂತದ ಮಾನ್ಯತೆ ಸಿಕ್ಕಿದೆ.

Spread the love

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸುಗಮ ಪ್ರಯಾಣಸ್ನೇಹಿ ಸೌಲಭ್ಯಗಳು ಮತ್ತು ತಂತ್ರಜ್ಞಾನ ಬಳಕೆಗಾಗಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಸಿಎ 2ನೇ ಹಂತದ ಮಾನ್ಯತೆ ಸಿಕ್ಕಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿಯು (ಎಸಿಐ) ಪ್ರವೇಶ ವರ್ಧಕ ಮಾನ್ಯತೆ (ಎಇಎ) ಕಾರ್ಯಕ್ರಮದಡಿ ವಿಮಾನ ನಿಲ್ದಾಣಗಳಲ್ಲಿನ ಸೌಲಭ್ಯ, ತಂತ್ರಜ್ಞಾನ ಬಳಕೆ, ಪ್ರಯಾಣಿಕಸ್ನೇಹಿ ಸೌಕರ್ಯಗಳನ್ನು ಆಧರಿಸಿ ಮಾನ್ಯತೆಯನ್ನು ನೀಡುತ್ತದೆ. ಈ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಎಸಿಐನ 2ನೇ ಹಂತದ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಂಗವಿಕಲರು, ಹಿರಿಯ ನಾಗರಿಕರು ಸುಲಭವಾಗಿ ಸಂಚರಿಸಲು ಹಾಗೂ ಇತರ ಸೌಲಭ್ಯಗಳನ್ನು ಸರಳವಾಗಿ ಬಳಸಿಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರ ಅಗತ್ಯತೆ ಪೂರೈಸುವ ಉದ್ದೇಶದಿಂದ ವಿಮಾನ ನಿಲ್ದಾಣದಲ್ಲಿ ಅಗತ್ಯ ಸೌಕರ್ಯ ಒದಗಿಸುವ ಎಇಎ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಇದೆಲ್ಲವನ್ನು ಪರಿಗಣಿಸಿ ಎಇಎ ಮಾನ್ಯತೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ನಿಲ್ದಾಣಗಳ ಕಾರ್ಯತಂತ್ರ, ನೀತಿ ನಿಯಮ ಮತ್ತು ಅವುಗಳಿಂದ ದೊರೆಯುವ ಫಲಿತಾಂಶವನ್ನು ಎಸಿಐ ಮೌಲ್ಯಮಾಪನ ಮಾಡುತ್ತದೆ. ಪ್ರಯಾಣಿಕರು, ಸಿಬ್ಬಂದಿ ಸೇರಿದಂತೆ ವಿಮಾನ ನಿಲ್ದಾಣದ ಎಲ್ಲ ಬಳಕೆದಾರರ ಪ್ರಯಾಣ ಅನುಭವದ ಅಭಿಪ್ರಾಯ ಆಧರಿಸಿ ಮಾನ್ಯತೆ ನೀಡಲಾಗಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಹೇಳಿದ್ದಾರೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ