ರಾಹುಲ್ ಗಾಂಧಿ ರ್ಯಾಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಸಂಪುಟದ ಸಚಿವರು ಭಾಗಿ
ಬಿಹಾರ ಚುನಾವಣಾ ಪ್ರಚಾರ ಅಖಾಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ , ಲೋಕೋಪಯೋಗಿ ಇಲಾಖೆ ಸಚಿವ ಸೀಶ್ ಜಾರಕಿಹೊಳಿ ಅವರು ಸೇರಿದಂತೆ ರಾಜ್ಯ ಸಂಪುಟದ ಅನೇಕ ಸಚಿವರು ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆಯುತ್ತಿರುವ ವೋಟರ್ ಅಧಿಕಾರ್ ಯಾತ್ರೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಶುಕ್ರವಾರ ಪಾಲ್ಗೊಂಡರು.
ಶುಕ್ರವಾರ ಬೆಂಗಳೂರಿನಿಂದ ಉತ್ತರಪ್ರದೇಶದ ಗೋರಖ್‌ಪುರಕ್ಕೆ ವಿಶೇಷ ವಿಮಾನದಲ್ಲಿ ತೆರಳಿರುವ ಅವರು ಅಲ್ಲಿಂದ ಸಿವಾನ್ ಜಿಲ್ಲೆಗೆ ತೆರಳಿ ಮತಗಳ್ಳತನ ವಿರುದ್ಧ ಹಮ್ಮಿಕೊಂಡಿರುವ ರ್ಯಾಲಿಯಲ್ಲಿ ಪಾಲ್ಗೊಂಡರು.
ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆದಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ರಾಹುಲ್‌ಗಾಂಧಿ ರ್ಯಾಲಿ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಅವರು ರ್ಯಾಲಿ ಪಾಲ್ಗೊಂಡು ರಾಹುಲ್ ಗಾಂಧಿ ಅವರಿಗೆ ಬೆಂಬಲ ನೀಡಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಇಂಧನ ಸಚಿವ ಕೆ.ಜೆ ಜಾರ್ಜ್, ವಿಧಾನ ಪರಿಷತ್ ಸದಸ್ಯೆ ಬಿ.ಕೆ. ಹರಿಪ್ರಸಾದ, ವಸತಿ ಸಚಿವ ಜಮೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯೆ ಸಲೀಂ ಅಹ್ಮದ್ ಸೇರಿದಂತೆ ರಾಜ್ಯದ ಅನೇಕ ನಾಯಕರು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆವೋಟರ್ ಅಧಿಕಾರ್ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
Laxmi News 24×7