ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು.
ಮಳೆ ಹಾಗೂ ಬಿಸಿಲಿನ ತಾಪದಿಂದ ರಕ್ಷಣೆ ಪಡೆಯಲು ಈ ಸಹಾಯವು ಸಣ್ಣ ವ್ಯಾಪಾರಿಗಳ ಜೀವನೋಪಾಯಕ್ಕೆ ನೆರವು ಮತ್ತು ನಿಜವಾದ ಸಾಂತ್ವನದ ನೆರಳಾಗಿ ಪರಿಣಮಿಸಿದೆ ಎಂದು ಭಾವಿಸುತ್ತೇನೆ.
ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಸತೀಶ ಜಾರಕಿಹೊಳಿ ಫೌಂಡೇಶನ್ ಈಗಾಗಲೇ ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ, ಕ್ರೀಡೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತನ್ನ ಕೊಡುಗೆಯನ್ನು ನೀಡಿದೆ.
ಸಾಮಾನ್ಯ ಜನರ ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸುವುದು ಫೌಂಡೇಶನ್’ನ ಧ್ಯೇಯವಾಗಿದ್ದು, ಸಚಿವ ಸತೀಶ ಜಾರಕಿಹೊಳಿಯವರ ಸಮಾಜಸೇವಾ ಮನೋಭಾವದಂತೆ ಅಗತ್ಯವಿರುವ ಪ್ರತಿಯೊಬ್ಬರಿಗೂ ಸಹಾಯ ಹಸ್ತ ನೀಡಲಿದೆ ಎಂದು ತಿಳಿಸಿದೆ.
ಈ ಸಂದರ್ಭದಲ್ಲಿ ಸಂಕೇಶ್ವರ ಪುರಸಭೆಯ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಅನೇಕ ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದರು.
Laxmi News 24×7