Breaking News

ಬಾಗಲಕೋಟೆಯಲ್ಲಿ ರಿಜಿಸ್ಟರ ಮ್ಯಾರೇಜಗೆ ಮಾತ್ರ ಅವಕಾಶ, ಮದುವೆ, ಸೀಮಂತ ಕಾರ್ಯಗಳಿಗೆ ಅನುಮತಿ ನಿಷೇಧ

Spread the love

ಬಾಗಲಕೋಟೆ : ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ನಡೆಯುವ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮುಂದಿನ ಆದೇಶದ ವರೆಗೆ ನಿಷೇಧಿಸಲಾಗಿದ್ದು, ರಿಜಿಸ್ಟರ ಮದುವೆಗೆ ಮಾತ್ರ ಅವಕಾಶವಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ನಡೆಯುತಿರುವ ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುತ್ತಿದ್ದು, ಇದರ ಪರಿಣಾಮ ಕಾರ್ಯಕ್ರಮದಲ್ಲಿ ಭಾಗವಹಿಸಿದರಿಗೂ ಕೊರೊನಾ ಸೋಂಕು ಹರಡುತ್ತಿರುವುದನ್ನು ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಮದುವೆ ಸಮಾರಂಭಕ್ಕೆ ಅನುಮತಿ ನೀಡಬಾರದೆಂದು ತಿಳಿಸಿದ ಹಿನ್ನಲೆಯಲ್ಲಿ ನಿಷೇಧಕ್ಕೆ ಮುಂದಾಗಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು
ಮದುವೆ ಕಾರ್ಯಕ್ರಮಗಳಿಂದ ಕೊರೊನಾ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿರುತ್ತವೆ. ಮದುವೆ ಸಮಾರಂಭದಿಂದ ಜಿಲ್ಲೆಯ ಕಲಾದಗಿ ಮತ್ತು ಇಲಕಲ್ಲದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ಬಂದಿವೆ. ಇನ್ನು ಬಾದಾಮಿ ಸೀಮಂತರ ಕಾರ್ಯಕ್ರಮದಿಂದ 15, ಶವ ಸಂಸ್ಕಾರದಿಂದ 20ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದಿರುವದರಿಂದ ಶವಸಂಸ್ಕಾರಕ್ಕೆ 20 ಜನರಿಗೆ ಸೀಮಿತಗೊಳಿಸಿ ಉಳಿದೆಲ್ಲ ಕಾರ್ಯಕ್ರಮಗಳಿಗೆ ಅನುಮತಿ ನೀಡುವದನ್ನು ನಿಷೇಧಿಸಲಾಗಿದೆ. ಮದುವೆ ಮಾಡಿಕೊಳ್ಳುವವರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಸೀಮಿತ ಸಂಖ್ಯೆಯಲ್ಲಿ ಆಗಮಿಸಿ ಮದುವೆ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲೆಯ 4 ಜನ ಪೊಲೀಸ್ ಸಿಬ್ಬಂದಿಗಳಿಗೆ ಸೋಂಕು ತಗಲಿತ್ತು. ಜಮಖಂಡಿಯ ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೂ ಸೋಂಕು ತಗುಲಿದೆ. ವೈದ್ಯರಿಗೆ ಹಿಪ್ಪರಗಿಯಲ್ಲಿ ಶವಸಂಸ್ಕಾರ ನಡೆಯುವ ಸಂದರ್ಭದಲ್ಲಿ ಹೋಗಿದ್ದಾಗ ಸೋಂಕು ತಗಲಿರುವ ಶಂಕೆ ವ್ಯಕ್ತಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕೊರೊನಾದಿಂದ ಇಬ್ಬರು ವೈದ್ಯಾಧಿಕಾರಿಗಳು ಓರ್ವ ಡಿ ದರ್ಜೆ ನೌಕರ ಮೃತಪಟ್ಟಿರುತ್ತಾರೆ. ಇದನ್ನು ನೀಡಿದರೆ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಆದ್ದರಿಂದ ಜನರಲ್ಲಿ ಹೆಚ್ಚಿನ ಜಾಗೃತಿ ಅಗತ್ಯವಾಗಿದೆ. ಶವಸಂಸ್ಕಾರಕ್ಕೆ ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು ಎಂದು ತಿಳಿಸಿದರು.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಸರಕಾರದ ನಿಯಮಗಳನ್ನು ಉಲ್ಲಂಘನೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ತಾಲೂಕಿಗೆ 4 ರಂತೆ 36 ಪೈಯಿಂಗ್ ಸ್ಕ್ವಾಡ್‍ಗಳನ್ನು ನೇಮಕ ಮಾಡಲಾಗಿದೆ. ಇವರು ಜನರು ಗುಂಪು ಗುಂಪಾಗಿ ಕೂಡ್ರುವ ಸ್ಥಳಗಳಲ್ಲಿ ಸಂಚರಿಸಿ ಮಾಸ್ಕ, ಸಾಮಾಜಿಕ ಅಂತರ ಪಾಲನೆಯಾಗುತ್ತಿರುವ ಬಗ್ಗೆ ನಿಗಾ ವಹಿಸಲಿದ್ದಾರೆ. ಉಲ್ಲಂಘನೆಯಾದಲ್ಲಿ ದಂಡ ಮತ್ತು ಕಾನೂನಿನ ಕ್ರಮಕೈಗೊಳ್ಳಲಿದ್ದಾರೆಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ ಮದುವೆ ಸಮಾರಂಭಕ್ಕೆ ಅನುಮತಿ ಪಡೆದು ಶರತ್ತುಗಳನ್ನು ಉಲ್ಲಂಘಿಸಿದವರ ವಿರುದ್ದ ಸ್ಥಳೀಯ ಸಂಸ್ಥೆಯ ಮೂಲಕ ಪೊಲೀಸ್ ಇಲಾಖೆಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಅಂತವರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ಅಲ್ಲದೇ ಕೊರೊನಾ ನಿಯಮ ಉಲ್ಲಂಘನೆಗೆ ಇಲ್ಲಿಯವರೆಗೆ 60 ಪ್ರಕರಣಗಳನ್ನು ದಾಖಲಿಸಲಾಗಿದೆ. ನಿಯಮ ಪಾಲನೆಯಾಗದ ವೈನ್‍ಶಾಪ್‍ವೊಂದನ್ನು ಮುಚ್ಚಿಸಲಾಗಿದೆ ಎಂದು ತಿಳಿಸಿದರು.

ಕೊರೊನಾ ನಿಯಂತ್ರಣಕ್ಕೆ ಪೊಲೀಸ್, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಜನರ ಸುರಕ್ಷತೆ ದೃಷ್ಠಿಯಿಂದ ಶ್ರಮಿಸುತ್ತಿದ್ದಾರೆ. ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ಹೋಗುವದಿದ್ದಲ್ಲಿ ಮುಂದೂಡುವುದು ಉತ್ತಮ. ಆದಷ್ಟು ಅನಾವಶ್ಯಕವಾಗಿ ಹೊರಗಡೆ ಬರುವದನ್ನು ಬಿಡಬೇಕು. ಜನರು ತಾವು ಸುರಕ್ಷಿತವಾಗಿರುವದರ ಜೊತೆ ತಮ್ಮ ಮನೆಯವರ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು. ಒಟ್ಟಾರೆಯಾಗಿ ಕೊರೊನಾ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಯಶವಂತ ಗೋರಕಾರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ