Breaking News

ಮನೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ.. ಸಹೋದರನಿಂದಲೇ ಕೃತ್ಯ!

Spread the love

ಶಿವಮೊಗ್ಗ: ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯಲ್ಲಿ ಶಾಲಾ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದ ಘಟನೆ ವರದಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ, ಮನೆಯ ಶೌಚಾಲಯದಲ್ಲಿ 15 ವರ್ಷದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.‌

ಬಾಲಕಿಗೆ ಹೆರಿಗೆಯಾದ ನಂತರ ಬಾಲಕಿಗೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯ ಪೋಷಕರು ದೂರು ನೀಡಿರುವ ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವಂತ ಅಣ್ಣನಿಂದಲೇ ಕೃತ್ಯ, ಬಂಧನ: 15 ವರ್ಷದ ಬಾಲಕಿಯು ಗರ್ಭ ಧರಿಸಲು ಆಕೆಯ 16 ವರ್ಷದ ಅಣ್ಣನೇ ಕಾರಣ ಎಂದು ಪೋಷಕರು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ. ಬಾಲಕಿಯು 9ನೇ ತರಗತಿ‌ ಓದಿದ್ದು, ಶಾಲೆ ಬಿಟ್ಟು ಮನೆಯಲ್ಲಿಯೇ ಇರುತ್ತಿದ್ದಳು. ಪೋಷಕರು ಕೆಲಸಕ್ಕೆ ಹೋದಾಗ ಸಹೋದರ ದುಷ್ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಪೋಷಕರಿಗೆ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದ ಎಂದು ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಾಲಕಿಯು ಏಳೂವರೆ ತಿಂಗಳಿಗೇ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮಗುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರು ನೀಡಿದ ದೂರಿನಂತೆ, 16 ವರ್ಷದ ಬಾಲಕನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ