ಚಿಕ್ಕೋಡಿ : ಕಾಂಗ್ರೆಸ್ ಪಕ್ಷವೂ ಹಿಂದಿನಿಗಿಂತಲ್ಲೂ ವಿಭಿನ್ನವಾಗಿ ಮುನ್ನಡೆಯಲಿದೆ. ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚು ಶ್ರಮವಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸೋಮವಾರ ಭೇಟಿ ನೀಡಿ ಅವರು ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತುಂಬಾ ಉತ್ಸಾಹಿ ಇದ್ದಾರೆ. ಪಕ್ಷವನ್ನು ಕಟ್ಟುವ ಛಲ ಅವರಲ್ಲಿದೆ. ಆದ ಕಾರಣ ಅವರೊಂದಿಗೆ ಮುನ್ನಡೆದರೆ ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೆ ಬರುತ್ತದೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿ ಬಂದಿದ್ದು ಅಪ್ರಸ್ತುತ. ಅವರ ಸಾಮರ್ಥ್ಯವನ್ನು ಹಾಗೂ ಪಕ್ಷದ ಸೇವೆಯನ್ನು ಕಂಡು ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಿದ್ದಾರೆ. ಇದರಿಂದ ಎಲ್ಲರೂ ಒಗ್ಗಟ್ಟಾಗಿ ಪಕ್ಷ ಕಟ್ಟುವ ಕೆಲಸ ಮಾಡೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿಗೆ ಚಿಕ್ಕೋಡಿ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಸತ್ಕರಿಸಿದರು.
ಈ ಸಂದರ್ಭದಲ್ಲಿ ಶಾಸಕ ಗಣೇಶ ಹುಕ್ಕೇರಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ವೀರಕುಮಾರ ಪಾಟೀಲ, ಮಾಜಿ ಶಾಸಕ ಎಸ್.ಬಿ.ಘಾಟಗೆ, ಕಾಂಗ್ರೆಸ್ ಮುಖಂಡರು, ಮಹಿಳಾ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು
ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಾದ್ಯಕ್ಷರಾಗಿ ಮೊದಲ ಬಾರಿಗೆ ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಹೊ ಗುಚ್ಚೆ ನೀಡಿ ಸ್ವಾಗತ ಮಾಡಿಕೊಂಡರು. ಬಳಿಕ ಚಿಕ್ಕೋಡಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾರ್ಯಕರ್ತರು ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿ ಗೌರವಿಸಿದರು,
ಇದೇ ಸಂದರ್ಭದಲ್ಲಿ ನೂತನ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಕಾರ್ಯಕರ್ತರನ್ನು ರಾಜ್ಯ ಕಾಂಗ್ರೆಸ್ ಕಾರ್ಯಾದ್ಯಕ್ಷರಿಂದ ಸತ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.