Breaking News

ಸಾಮೂಹಿಕ ಅತ್ಯಾಚಾರ ಆರೋಪ: ಶಾಸಕ ಮುನಿರತ್ನ ವಿರುದ್ಧ ಬಿ ರಿಪೋರ್ಟ್​ ಸಲ್ಲಿಸಿದ ಎಸ್​ಐಟಿ

Spread the love

ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಬಿ ರಿಪೋರ್ಟ್ ಸಲ್ಲಿಸಿದೆ ಎಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್, ಅರ್ಜಿದಾರರ ಪರ ವಕೀಲರು, ಪ್ರಕರಣ ಸಂಬಂಧ ಬಿ ವರದಿ ಸಲ್ಲಿಸಲಾಗಿದೆ. ಆದ್ದರಿಂದ ಅರ್ಜಿಯನ್ನು ಹಿಂಪಡೆಯಬೇಕು ಎಂದು ಕೋರಿದರು.

ಈ ವೇಳೆ ಸರ್ಕಾರದ ಪರ ವಕೀಲರು, ತನಿಖಾಧಿಕಾರಿಗಳು ಬಿ ವರದಿ ಸಲ್ಲಿಸಿದ್ದಾರೆ. ಆದರೆ, ನ್ಯಾಯಾಲಯ ಆ ವರದಿಯನ್ನು ಈವರೆಗೂ ಪರಿಗಣಿಸಿಲ್ಲ. ಇದೀಗ ಯಾವುದೇ ಆದೇಶ ನೀಡಬಾರದು ಎಂದು ಪೀಠಕ್ಕೆ ತಿಳಿಸಿದರು.

ವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ಸಂಬಂಧ ಮುನಿರತ್ನ ಅವರನ್ನು ಬಂಧಿಸದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿ, ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ ಹಿನ್ನೆಲೆ : ಮಹಿಳೆಯನ್ನು ವಿವಸ್ತ್ರಗೊಳಿಸಿ, ಸಹಚರರಿಂದ ಆತ್ಯಾಚಾರ ಮಾಡಿಸಿದ ಮತ್ತು ವೈರಸ್ ತಗುಲುವ ಚುಚ್ಚುಮದ್ದು ನೀಡಲಾಗಿತ್ತು ಎಂದು ಆರೋಪಿಸಿ ಮಹಿಳೆಯೊಬ್ಬರು ಬಿಜೆಪಿ ಶಾಸಕ ಮುನಿರತ್ನ ಮತ್ತಿತರರ ವಿರುದ್ಧ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.


Spread the love

About Laxminews 24x7

Check Also

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

Spread the loveಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ