Breaking News

ಸಂಸದೆ ಸುಮಲತಾ ಅಂಬರೀಷ ಅವರಿಗೆ ಕೊರೊನಾ ಸೋಂಕು ದೃಢ

Spread the love

ಆತ್ಮೀಯರೆ,
ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.
ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ- ಸುಮಲತಾ ಅಂಬರೀಷ್‌ ಸದಸ್ಯೆ, ಮಂಡ್ಯ ಲೋಕಸಭಾ ಕ್ಷೇತ್ರ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ