Breaking News

ಧಾರವಾಡ ಬೀದಿಗೆ ಇಳಿದ ವಿದ್ಯಾರ್ಥಿಗಳ ಆಕ್ರೋಶ…. ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ.

Spread the love

ಧಾರವಾಡ ಬೀದಿಗೆ ಇಳಿದ ವಿದ್ಯಾರ್ಥಿಗಳ ಆಕ್ರೋಶ…. ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ.
– ಧಾರವಾಡದ ಸಪ್ತಾಪುರದಲ್ಲಿರುವ ಎಸ್‌ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ, ಹಾಸ್ಟೆಲ್ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಡನೆ ನಡೆಸಿ ಅಧಿಕಾರಿಗಳ ಸೇರಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು‌.
ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡದಲ್ಲಿ ಪ್ರತಿ ವರ್ಷದಿಂದ ವರ್ಷಕ್ಕೆ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಲು ಇಲ್ಲಿಗೆ ಬರುವ ಸಂಖ್ಯೆ ಹೆಚ್ಚಾಗುತ್ತಿದೆ. ಅವರು ಕಾಲೇಜಿನಲ್ಲಿ ಪ್ರವೇಶ ಪಡೆದರೂ ವಸತಿ ಸೌಲಭ್ಯಕ್ಕೆ ಹಾಸ್ಟೆಲ್‌ ಸಿಗದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಹಾಸ್ಟೆಲ್ ದೊರೆತರೂ ಅಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳು ಖಾತ್ರಿಯಾಗದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಸಪ್ತಾಪುರದ ಎಸ್‌ಟಿ ಬಾಲಕರ ಹಾಸ್ಟೆಲ್ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಗುಣಮಟ್ಟದ ಆಹಾರ ವ್ಯವಸ್ಥೆ, ಸ್ವಚ್ಛತೆ ಇಲ್ಲದೇ ಇರುವುದು ಹಾಗೂ ಮೂಲಭೂತ ಸೌಕರ್ಯಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಈ ಸಮಸ್ಯೆಗಳನ್ನು ಬಗೆಹರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ