Breaking News

ದಸರಾ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ವಿಶೇಷ ರೈಲು ಸೇವೆ

Spread the love

ಹುಬ್ಬಳ್ಳಿ: ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನಂತೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

1. ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟಂಬರ್ 30, 2025 ರಂದು ಮಧ್ಯಾಹ್ನ 12:00ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ ತಲುಪಲಿದೆ. ಈ ರೈಲು ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲಲಿದೆ.

2. ರೈಲು ಸಂಖ್ಯೆ 06277 ಯಶವಂತಪುರ – ವಿಜಯಪುರ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟಂಬರ್ 30, 2025 ರಂದು ರಾತ್ರಿ 09:50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 09:30ಕ್ಕೆ ವಿಜಯಪುರ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06278 ವಿಜಯಪುರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 1, 2025 ರಂದು ಸಂಜೆ 05:30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಗ್ಗೆ 06:40ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ.

3. ರೈಲು ಸಂಖ್ಯೆ 06279 ಯಶವಂತಪುರ – ವಿಜಯಪುರ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 2, 2025 ರಂದು ಸಂಜೆ 07:40ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 07:45ಕ್ಕೆ ವಿಜಯಪುರ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ ರೈಲು ಸಂಖ್ಯೆ 06280 ವಿಜಯಪುರ – ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 3, 2025 ರಂದು ಸಂಜೆ 05:30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಗ್ಗೆ 08:10ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ (ಸಂಖ್ಯೆ 06277/06278 ಮತ್ತು 06279/06280) ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಎಸ್‌ಎಂಎಂ ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಎಲ್ಲಾ ರೈಲುಗಳು ಒಂದು ಪ್ರಥಮ ದರ್ಜೆ ಕಮ್ ಸೆಕೆಂಡ್ ಎಸಿ ಕೋಚ್, ಒಂದು ಎಸಿ 3-ಟೈರ್, ಎರಡು ಎಸಿ 2-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಮತ್ತು ಎಸ್‌ಎಲ್‌ಆರ್‌ಡಿ ಬೋಗಿಗಳನ್ನು ಒಳಗೊಂಡಂತೆ ಒಟ್ಟು 21 ಬೋಗಿಗಳನ್ನು ಹೊಂದಿರುತ್ತವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ