ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವವಿಲ್ಲದೆ ಸಂಪೂರ್ಣ ಸರಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಹೋರಾಟ ಸಮಿತಿಯ ನಿಯೋಗವು ಬೃಹತ್ ಪ್ರತಿಭಟನೆ ನಡೆಸಿತು. ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ನಗರದ ಗಾಂಧಿ ವೃತ್ತ,
ಬಸವೇಶ್ವರ ವೃತ್ತ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು. ಸಭೆ ಸೇರಿದ ನಿಯೋಗವು ಯಾವುದೇ ಕಾರಣಕ್ಕೂ ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜ್ ನ್ನು ಜಿಲ್ಲೆಯ ಜನತೆ ಒಪ್ಪುವುದಿಲ್ಲ. ಈಗಾಗಲೇ ವಿಜಯಪುರದಲ್ಲಿ ಎರಡು ಖಾಸಗಿ ಮೆಡಿಕಲ್ ಕಾಲೇಜುಗಳು ಇದ್ದು, ಅವು ಕೂಡ ಪ್ರಾರಂಭದಲ್ಲಿ ಜಿಲ್ಲಾ ಆಸ್ಪತ್ರೆಯನ್ನು ಬಳಸಿಕೊಂಡಿವೆ. ಸರಕಾರಿ ವೈದ್ಯಕೀಯ ಕಾಕೇಜಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳೂ ಜಿಲ್ಲಾ ಆಸ್ಪತ್ರೆಯಲ್ಲಿವೆ.
ಸರಕಾರ ಕೂಡಲೇ ಸಂಪೂರ್ಣ ಸರಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಪ್ರಾರಂಭಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರೈತ ಸಂಘಟನೆಗಳು, ದಲಿತ ಪರ ಸಂಘಟನೆಗಳು, ವಿದ್ಯಾರ್ಥಿಗಳು ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.
Laxmi News 24×7