Breaking News

ಕೃಷ್ಣನಗರಿಯಲ್ಲಿ ಅಷ್ಟಮಿ ಸಡಗರ

Spread the love

ಉಡುಪಿ: ಶ್ರೀ ಕೃಷ್ಣ ಮಠದಲ್ಲಿಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಸಡಗರ. ಪೊಡವಿಗೊಡೆಯನ ಜನ್ಮದಿನವನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ವೈಭವದಿಂದ ನೆರವೇರಿಸಲಾಗುತ್ತಿದೆ. ಬೆಳಗ್ಗಿನಿಂದಲೇ ಭಕ್ತರು ಮಠಕ್ಕೆ ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಪರ್ಯಾಯ ಪುತ್ತಿಗೆ ಮಠಾಧೀಶರು ವಿಶೇಷ ಪೂಜೆ ನೆರವೇರಿಸಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ಉಂಡೆ ಚಕ್ಕುಲಿಗಳು ಸಿದ್ಧಗೊಂಡಿದ್ದು, ಭಕ್ತರಿಗೆ ಹಂಚಲಾಗುತ್ತದೆ.

ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ ನಡೆದರೆ, ಸೆ.15ರಂದು ಕೃಷ್ಣ ಲೀಲೋತ್ಸವ (ವಿಟ್ಲಪಿಂಡಿ) ಸಂಪನ್ನಗೊಳ್ಳಲಿದೆ. ಮೊಸರು ಕುಡಿಕೆ ಉತ್ಸವಕ್ಕೆ ರಥಬೀದಿಯ ಸುತ್ತಲೂ ತ್ರಿಕೋನಾಕೃತಿಯ ಗುರ್ಜಿಗಳನ್ನು ನಿರ್ಮಾಣ ಮಾಡಲಾಗಿದೆ.ಬೆಳಗ್ಗೆ 10 ಗಂಟೆಗೆ ರಾಜಾಂಗಣದಲ್ಲಿ ಮುದ್ದು ಕೃಷ್ಣ ಮತ್ತು ಮುದ್ದುರಾಧೆ ವೇಷ ಸ್ಪರ್ಧೆಗಳಿಗೆ ಪರ್ಯಾಯ ಪುತ್ತಿಗೆ ಮಠಾಧೀಶರು ಚಾಲನೆ ನೀಡಿದರು. ನೂರಾರು ಮುದ್ದು ಕೃಷ್ಣ ಮತ್ತು ಮುದ್ದುರಾಧೆ ವೇಷಧಾರಿಗಳು ರಾಜಾಂಗಣದಲ್ಲಿ ಪರ್ಯಾಯ ಸ್ವಾಮೀಜಿಗಳ ಹತ್ತಿರ ಕುಳಿತು ಫೋಟೋ ತೆಗೆಸಿಕೊಂಡರು. ಪರ್ಯಾಯ ಪುತ್ತಿಗೆ ಸ್ವಾಮೀಜಿ ಮತ್ತು ಕಿರಿಯ ಶ್ರೀಗಳು ಪುಟಾಣಿಗಳನ್ನು ಎತ್ತಿ ಮುದ್ದಾಡಿದರು. ಬಳಿಕ ರಾಜಾಂಗಣ ಮಧ್ವಮಂಟಪ ಮತ್ತು ಗೀತಾ ಮಂದಿರದಲ್ಲಿ ಸ್ಪರ್ಧೆಗಳು ನಡೆದವು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ