Breaking News

ಸಂಕಷ್ಟ ಬಂದಾಗ ಸಿದ್ಧರಾಮಯ್ಯಗೆ ಕುರುಬರು ನೆನಪಾಗ್ತಾರೆ: ಹೆಚ್.ವಿಶ್ವನಾಥ್

Spread the love

ಮೈಸೂರು: ಸಿಎಂ ಸಿದ್ಧರಾಮಯ್ಯ ತಮ್ಮ ಬೆಳವಣಿಗೆಗಾಗಿ ಕುರುಬರ ತನು ಮನ ಎಲ್ಲವನ್ನೂ ಬಳಸಿಕೊಂಡು ಮೇಲೆ ಬಂದಿದ್ದಾರೆ. ಆದರೆ ಕುರುಬ ಸಮುದಾಯಕ್ಕಾಗಿ ಅವರು ಯಾವುದೇ ಕೊಡುಗೆಗಳನ್ನು ನೀಡಿಲ್ಲ. ಈಗ ತಮಗೆ ಸಂಕಷ್ಟ ಬಂದಿದೆ. ಅದಕ್ಕಾಗಿ ಕುರುಬರು ನೆನಪಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಇದು ಸ್ವಾಗತಾರ್ಹ ಎಂದರು.

ಸಿದ್ದರಾಮಯ್ಯ ಕುರುಬ ಸಮುದಾಯವನ್ನು ಎಸ್​​ಟಿ ಸಮುದಾಯಕ್ಕೆ ಸೇರಿಸುವುದಾಗಿ ಹೇಳುತ್ತಿದ್ದಾರೆ. ಅವರು ಮನಸ್ಸು ಮಾಡಿದ್ದಿದ್ದರೆ ಎಂದೋ ಈ ಕೆಲಸ ಮಾಡಬಹುದಿತ್ತು. ಕುರುಬ ಸಮುದಾಯಕ್ಕೆ ಯಾವುದೇ ಕೊಡುಗೆ ನೀಡದ ಅವರು, ಆ ಸಮುದಾಯದ ನಾಯಕರನ್ನು ವ್ಯವಸ್ಥಿತವಾಗಿ ತುಳಿದರು. ಸಮುದಾಯದ ನಾಯಕರನ್ನು ಅವರು ಬೆಳೆಯಲು ಬಿಡಲಿಲ್ಲ. ಹಿಂದುಳಿದ ವರ್ಗಗಳ ನಾಯಕ ಎಂದು ಹೇಳುವ ಸಿಎಂ, ಈ ವರ್ಗಕ್ಕೆ ಯಾವುದೇ ಕೊಡುಗೆ ನೀಡಲಿಲ್ಲ, ಹೋರಾಟ ಮಾಡಲಿಲ್ಲ. ಬರೀ ಬೊಗಳೆ ಬಿಟ್ಟುಕೊಂಡು ಓಡಾಡ್ತಿದ್ದಾರೆ. ಹಿಂದುಳಿದ ವರ್ಗಗಳ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಟೀಕಿಸಿದರು.

ನಾಯಕ ಸಮುದಾಯವನ್ನು ಎಸ್​​ಟಿ ಸಮುದಾಯಕ್ಕೆ ಸೇರಿಸಿದ್ದು ಹೆಚ್.ಡಿ.ದೇವೇಗೌಡರು. ಈಗ ಕಾಗಿನೆಲೆ ಮಠಾಧಿಪತಿಗಳನ್ನು ಸಿದ್ಧರಾಮಯ್ಯ ಮುಂದಕ್ಕೆ ಬಿಡ್ತಾರೆ. ಆದರೆ ಸ್ವಾಮೀಜಿಗಳನ್ನು ಸಿದ್ಧರಾಮಯ್ಯ ಪೀಠಾಧಿಪತಿಯನ್ನಾಗಿ ಮಾಡಿಲ್ಲ. ನಿಮ್ಮನ್ನು ಪೀಠಾಧಿಪತಿ ಮಾಡಿದ್ದು ವಿಶ್ವನಾಥ್. ಮಠಕ್ಕೂ ಸಿದ್ಧರಾಮಯ್ಯಗೂ ಯಾವುದೇ ಸಂಬಂಧವಿಲ್ಲ. ಮಠಾಧಿಪತಿಗಳೇನು ಸಿದ್ಧರಾಮಯ್ಯ ಅಥವಾ ಕಾಂಗ್ರೆಸ್ ಪಕ್ಷದ ಜೀತದಾಳುಗಳಲ್ಲ. ಮಠಾಧಿಪತಿಗಳು, ಸಿದ್ಧರಾಮಯ್ಯ ಅಥವಾ ಕಾಂಗ್ರೆಸ್ ಪರವಾಗಿ ಬೀದಿಗಿಳಿದರೆ ನಿಮ್ಮ ತಲೆದಂಡವಾಗಲಿದೆ. ನಿಮ್ಮನ್ನು ಪೀಠದಿಂದ ಕೆಳಗಿಳಿಸಬೇಕಾಗುತ್ತದೆ. ಕುರುಬರ ಹುಡುಗರಿಗೆ ಸಿದ್ಧರಾಮಯ್ಯ ಉತ್ತಮ ಭವಿಷ್ಯ ರೂಪಿಸಲಿಲ್ಲ ಎಂದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ