ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕುಮಾರಿ ಪ್ರಿಯಾಂಕ ಸತೀಶ್ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿನ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಬೋರಗಾಂವ ವೃತ್ತದಲ್ಲಿ ಇಂದು ಭಾಟನಾಗನೂರ
ಬೋರಗಾಂವವಾಡಿ ರಸ್ತೆ (ರಾಜಿ-98) ರಸ್ತೆ ಕಿಮೀ 35.38 ರಿಂದ 38.00 (ಬೋರಗಾಂವವಾಡಿ ಕ್ರಾಸ್‌ದಿಂದ ಬೋರಗಾಂವ ವೃತ್ತ ) ವರೆಗೆ ಅಂದಾಜು ₹ 3.50 ಕೋಟಿ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಇಂದು ಚಾಲನೆ ನೀಡಿದರು.
ಈ ವೇಳೆ ಬೋರಗಾಂವ ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿ, ಸನ್ಮಾನ ಸ್ವೀಕರಿಸಿದ ನಂತರ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಶ್ರೀ ಲಕ್ಷ್ಮಣರಾವ್ ಚಿಂಗಳೆ, ಮುಖಂಡರು ಶ್ರೀ ಉತ್ತಮ ಪಾಟೀಲ, ಬೋರಗಾಂವ ಪಟ್ಟಣ ಪಂಚಾಯಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.