Breaking News

ಬಸವಣ್ಣ ಲಿಂಗಾಯತ ಧರ್ಮವನ್ನು ಸ್ಥಾಪಿಸಿಲ್ಲ: ಯತ್ನಾಳ್

Spread the love

ಚಿಕ್ಕೋಡಿ (ಬೆಳಗಾವಿ): ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ, ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ. ಬಸವಣ್ಣನವರು ಹಿಂದೂ ಸಮಾಜದಲ್ಲಿ ಮೌಢ್ಯಗಳ ವಿರುದ್ಧ ಹೋರಾಡಿದ್ದಾರೆಯೇ ಹೊರತು ಲಿಂಗಾಯತ ಧರ್ಮವನ್ನು ಸ್ಥಾಪನೆಯೇ ಮಾಡಿಲ್ಲ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಚರ್ಚೆಯೊಂದನ್ನು ಹುಟ್ಟುಹಾಕಿದ್ದಾರೆ.

ಜಿಲ್ಲೆಯ ರಾಯಭಾಗ ತಾಲೂಕಿನ ಹಾರುಗೇರಿಯಲ್ಲಿ ಪಂಚಮಸಾಲಿ ಮೀಸಲಾತಿ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ಮಠಾಧೀಶರು ವೀರಶೈವ ಲಿಂಗಾಯತ ಎಂದು ಜಾತಿಗಣತಿಯಲ್ಲಿ ಉಲ್ಲೇಖಿಸುವಂತೆ ಹೇಳುತ್ತಿದ್ದಾರೆ. ಆದರೆ ಎಲ್ಲಿಯವರೆಗೆ ಕೇಂದ್ರ ಸರ್ಕಾರ ವೀರಶೈವ ಲಿಂಗಾಯತ ಎಂದು ಅಧಿಕೃತವಾಗಿ ಘೋಷಣೆ ಮಾಡುವುದಿಲ್ಲವೋ ಅಲ್ಲಿಯವರೆಗೆ ಈ ರೀತಿ ನಾವು ಬರೆಸಿದರೆ ಯಾವುದೇ ಅರ್ಥವಿಲ್ಲ. ಕೆಲವು ಮೂರ್ಖರು ಲಿಂಗಾಯತ ಸಮುದಾಯವನ್ನು ತಪ್ಪು ದಾರಿಗೆ ಎಳೆಯುವುದಕ್ಕೆ ಪ್ರಯತ್ನ ಪಡುತ್ತಿದ್ದಾರೆ ಎಂದು ಯತ್ನಾಳ್​ ಹರಿಹಾಯ್ದರು.

ಧರ್ಮ ಎಂದಲ್ಲಿ ಹಿಂದೂ ಎಂದೇ ಬರೆಸಬೇಕು, ಜಾತಿ ಕಾಲಂನಲ್ಲಿ ಲಿಂಗಾಯತ, ಪಂಚಮಸಾಲಿ ಏನಿದೆಯೋ ಅದನ್ನು ಬರೆಸಬೇಕು, ಸರ್ಕಾರದ ಮೀಸಲಾತಿಯಲ್ಲಿ ವೀರಶೈವ ಲಿಂಗಾಯತ ಎಂಬುದೇ ಇಲ್ಲ, ಆರು ಧರ್ಮಕ್ಕೆ ಮಾತ್ರ ನಮ್ಮ ಸಂವಿಧಾನದಲ್ಲಿ ಅವಕಾಶ ಇದೆ. ಧರ್ಮ ಎಂದು ಘೋಷಿಸದಿರುವುದನ್ನು ಸೇರಿಸಿ ಭವಿಷ್ಯದ ನಮ್ಮ ಮಕ್ಕಳನ್ನು ಕೊಲೆ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

2ಎ ಮೀಸಲಾತಿ ನಿರಂತರವಾಗಿ ನಡೆಯುತ್ತದೆ, ಸುಪ್ರೀಂ ಕೋರ್ಟ್​ನಲ್ಲಿ 2ಸಿ, 2ಡಿ ಎಂಬ ವಿಚಾರಣೆ ನಡೆಯುತ್ತಿದೆ. ವೀರಶೈವ ಲಿಂಗಾಯತ ಎಂದು ಬರೆಸಿದರೆ ಮೀಸಲಾತಿ ಸಿಗುವುದಿಲ್ಲ. ಹಿಂದೂ ಲಿಂಗಾಯತ ಪಂಚಮಸಾಲಿ ಎಂದು ಬರೆಸಿದರೆ ಮೀಸಲಾತಿ ಸಿಗುತ್ತದೆ. ಕೆಲವು ಲಿಂಗಾಯತರು 2ಎದಲ್ಲಿ ಸೇರಿದ್ದಾರೆ. ಸರ್ಕಾರದಲ್ಲಿ ಮೀಸಲಾತಿಗೆ ಸೇರಿದವರು ಹಿಂದೂ ಎಂದು ಉಲ್ಲೇಖಿಸಿ ತಮ್ಮ ಉಪಜಾತಿಯನ್ನು ಬರೆಸಿದ್ದಾರೆ. ವೀರಶೈವ ಲಿಂಗಾಯತವನ್ನು ಧರ್ಮ ಅಂತ ಕೇಂದ್ರ ಸರ್ಕಾರ ಅನುಮೋದನೆಯೇ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ