ಬೆಂಗಳೂರು: ಸೆಪ್ಟಂಬರ್ 22 ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆ ಸಂಬಂಧ ಬೆಂಗಳೂರಲ್ಲಿ ನಡೆದ ಒಕ್ಕಲಿಗ ಸಮುದಾಯದ ಸಭೆಯಲ್ಲಿ ಜಾತಿ ಪಟ್ಟಿಯಲ್ಲಿ ಧರ್ಮ ಹಿಂದೂ, ಜಾತಿ ಒಕ್ಕಲಿಗ ಎಂದು ಬರೆಸುವಂತೆ ನಿರ್ಣಯ ಕೈಗೊಳ್ಳಲಾಗಿದೆ.
ಜಾತಿ ಸಮೀಕ್ಷೆ ಗೊಂದಲ ಸಂಬಂಧ ಒಕ್ಕಲಿಗ ಸಮುದಾಯ ವಿಜಯನಗರದ ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಶನಿವಾರ (ಸೆ.20) ಏರ್ಪಡಿಸಿದ್ದ ಸಭೆಯಲ್ಲಿ ಒಕ್ಕಲಿಗ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡಿದರು. ಸಭೆಯಲ್ಲಿ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶಿರಾದ ಶ್ರೀ ಸ್ಫಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಚಿವರಾದ ಚಲುವರಾಯಸ್ವಾಮಿ, ಸಂಸದ ಡಾ. ಸುಧಾಕರ್, ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್, ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ಸಮುದಾಯದ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ಇನ್ನಿತರ ಮುಖಂಡರು ಭಾಗವಹಿಸಿದ್ದರು.
Laxmi News 24×7