Breaking News

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಬ್ಯುಸಿನೆಸ್ ಮ್ಯಾನೇಜ್​​ಮೆಂಟ್​ ವಿದ್ಯಾರ್ಥಿಗಳ ಬಂಧನ

Spread the love

ಮಣಿಪಾಲ (ಉಡುಪಿ) : ತಾಲೂಕಿನ ಶಿವಳ್ಳಿ ಗ್ರಾಮದ ರಾಯಲ್ ಎಂಬೆಸಿ ಅಪಾರ್ಟ್​ಮೆಂಟ್​ಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸೆಪ್ಟೆಂಬರ್ 18 ರಂದು ರಾತ್ರಿ 11 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದ ತಂಡವು, ರಾಯಲ್ ಎಂಬೆಸಿ ಅಪಾರ್ಟ್​ಮೆಂಟ್​​ನ 17ನೇ ಮಹಡಿಯ ಫ್ಲಾಟ್ (C-1702) ಮೇಲೆ ದಾಳಿ ನಡೆಸಿ ಆರ್ಯನ್ ಸಿ. ತಾದಾನಿ ಎಂಬಾತನನ್ನು ಬಂಧಿಸಿದೆ. ಅವನಿಂದ 2 ಕೆಜಿ 105 ಗ್ರಾಂ (₹60,000 ಮೌಲ್ಯ) ಗಾಂಜಾ, ಹುಕ್ಕಾ, ಡಿಜಿಟಲ್ ಸ್ಕೇಲ್ ಹಾಗೂ ₹75,000 ಮೌಲ್ಯದ ಐಫೋನ್ ಸ್ವಾಧೀನಪಡಿಸಿಕೊಂಡಿದ್ದಾರೆ.

ಮುಂದಿನ ತನಿಖೆಯಲ್ಲಿ ಇನ್ನೋರ್ವ ಆರೋಪಿ ಆರ್ಯನ್ ಚಗಪ್ಪನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದ್ದು, ಅವನ ಸ್ಕೂಟಿ (KA 20 EX 7595)ಯಿಂದ 627 ಗ್ರಾಂ (₹20,000 ಮೌಲ್ಯದ) ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಬಂಧಿತರು ಇಬ್ಬರೂ ಮಣಿಪಾಲದ ಪ್ರತಿಷ್ಠಿತ ಕಾಲೇಜಿನ ಬ್ಯುಸಿನೆಸ್ ಮ್ಯಾನೇಜ್​ಮೆಂಟ್ ವಿದ್ಯಾರ್ಥಿಗಳು. ಮಾದಕ ವ್ಯಸನಿಗಳಾಗಿರುವ ಇವರು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದರೆಂಬುದು ತನಿಖೆಯಿಂದ ಬಹಿರಂಗವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ