Breaking News

ಪಂಡಿತ್ ವೆಂಕಟೇಶ್ ಕುಮಾರ್​ಗೆ ಸಂಗೀತ ವಿದ್ವಾನ್ ಪ್ರಶಸ್ತಿ

Spread the love

ಮೈಸೂರು: ಮುಂದಿನ ಒಲಿಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಸೋಮವಾರ ಉದ್ಘಾಟಿಸಿ ಸಿಎಂ ಮಾತನಾಡಿದರು.

ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3,600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲು ಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತೆ ಅಂತಾರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ