Breaking News

ಡಿಸಿಎಂ ಡಿ.ಕೆ.ಶಿವಕುಮಾರ್​ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್​ ತಿಳಿಸಿದೆ.

Spread the love

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಾಪಸ್​ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್​ ಸೋಮವಾರ ತಿಳಿಸಿದೆ.

ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವರು ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ನೇತೃತ್ವದ ಪೀಠವು ಇಂದು ಇವುಗಳ ವಿಚಾರಣೆ ನಡೆಸಿತು.

ಇದೇ ಪ್ರಕರಣವನ್ನು ಈ ಹಿಂದೆ ನ್ಯಾಯಮೂರ್ತಿ ಸೂರ್ಯಕಾಂತ್​ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿತ್ತು. ಈಗ ಅವರ ಪೀಠಕ್ಕೆ ವಿಚಾರಣೆ ನಡೆಸುವಂತೆ ಅರ್ಜಿಗಳನ್ನು ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್​ ತಿಳಿಸಿತು.

ಈ ವೇಳೆ ಡಿ.ಕೆ.ಶಿವಕುಮಾರ್​ ಅವರ ಪರ ಹಿರಿಯ ವಕೀಲರಾದ ಅಭಿಷೇಕ್ ಎಂ. ಸಿಂಘ್ವಿ ಅವರು, ರಾಜಕೀಯ ವಿಷಯಗಳು ಕೋರ್ಟಿನ ಆಚೆಗೆ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಎಂದು ಸಿಜೆಐ ಈ ಹಿಂದೆ ಹೇಳಿದ್ದರು ಎಂದು ಪೀಠದ ಗಮನಕ್ಕೆ ತಂದರು.

ಆದರೆ, ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಅರ್ಜಿಗಳನ್ನು ವಿಚಾರಣೆ ನಡೆಸುವುದು ನ್ಯಾಯದ ದೃಷ್ಟಿಯಿಂದ ಒಳಿತು ಎಂದು ಸಿಜೆಐ ಗವಾಯಿ ನೇತೃತ್ವದ ಪೀಠ ಅಭಿಪ್ರಾಯಪಟ್ಟಿತು. ಜೊತೆಗೆ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಈ ಹಿಂದೆಯೂ ಈ ವಿಷಯವನ್ನು ವಿಚಾರಣೆ ನಡೆಸಿದ್ದರು ಎಂದಿತು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ