ಬೆಳಗಾವಿ :ಸರಕಾರ ಆರಂಭಿಸಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯ ಎಲ್ಲ ಉಪಜಾತಿಗಳು ಧರ್ಮದ ಕಾಲಂನಲ್ಲಿ ಬೌದ್ಧ ಹಾಗೂ ಜಾತಿಯ ಕಾಲಂನಲ್ಲಿ ಪರಿಶಿಷ್ಟ ಜಾತಿ ಎಂದು ಬರೆಸಬೇಕು ಎಂದು ಭಾರತೀಯ ಭೌದ್ಧ ಮಹಾಸಭಾದ ಅಧ್ಯಕ್ಷ ಎಸ್.ಆರ್. ಕೋಕಾಟೆ ಹೇಳಿದರು.
ಬುಧವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯ ಸರಕಾರದಿಂದ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ಆರಂಭವಾಗಿದೆ. ಜಾತಿ ಸಮೀಕ್ಷೆ ಮಾಡುವ ಮುನ್ನ ಮೊದಲ ಬಾರಿಗೆ ಬೌದ್ಧ ಧರ್ಮದ ಬಗ್ಗೆ ಉಲ್ಲೇಖ ಮಾಡಿರುವುದು ಸ್ವಾಗತಾರ್ಹ. ಆದ್ದರಿಂದ ಪರಿಶಿಷ್ಟ ಜನಾಂಗದವರು ಧರ್ಮದ ಕಾಲಂನಲ್ಲಿ ಬೌದ್ಧ ಧರ್ಮ ಹಾಗೂ ಜಾತಿಯಲ್ಲಿ ಪರಿಶಿಷ್ಟ ಪಂಗಡ ಎಂದು ಬರೆಸಿ ಎಂದರು.
ಬೌದ್ಧ ಧರ್ಮದಲ್ಲಿ ಸಮಾನತೆ ಇದೆ. ಇದರಲ್ಲಿ ತಾರತಮ್ಯ ಇಲ್ಲ. ಬೌದ್ಧ ಧರ್ಮ ಅತೀ ಮಹತ್ವದ್ದು ಎಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಬೌದ್ಧ ಧರ್ಮದ ಶಿಕ್ಷಣ ಪಡೆದರು. ರಾಜ್ಯ ಸರಕಾರ ಬೌದ್ಧ ಧರ್ಮದ ನಿಗಮ ಮಂಡಳಿ ಸ್ಥಾಪನೆ ಮಾಡಬೇಕೆಂದು ಒತ್ತಾಯಿಸುತ್ತೇನೆ ಎಂದರು.
ದೇಶದಲ್ಲಿರುವ ಹರಿಜನ, ಹಿರಿಜನರು ಬೌದ್ಧ ಧರ್ಮಕ್ಕೆ ಮತಾಂತರವಾಗಬೇಕು. ಪರಿಶಿಷ್ಟ ಜಾತಿಯವರು ಬೌದ್ಧ ಧರ್ಮ ಎಂದು ಬರೆಸಿ ರಾಜ್ಯದಲ್ಲಿ ನಮ್ಮ ಧರ್ಮದ ಜನಸಂಖ್ಯೆ ಎಷ್ಟಿದೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದರು.
ಯಮನಪ್ಪ ಗಡಿನಾಯಕ, ಯಲ್ಲರ ಕಾಂಬಳೆ, ಡಿ.ಎಂ.ಶಿಂಧೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.