Breaking News

ಓದುವ ವಯಸ್ಸಲ್ಲಿ ಪ್ರೀತಿ-ಪ್ರೇಮ: ಹೆದರಿ ದುರಂತ ಅಂತ್ಯ

Spread the love

ಕೋಲಾರ, (ಸೆಪ್ಟೆಂಬರ್ 25): ಅಪ್ರಾಪ್ತ ಪ್ರೇಮಿಗಳ ಪ್ರೀತಿ-ಪ್ರೇಮ ಸಾವಿನಲ್ಲಿ ಅಂತ್ಯವಾಗಿದೆ. ಹೌದು…ಕುಟುಂಬದ ಭಯದಿಂದ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಬ್ಯಾಟರಾಯನಹಳ್ಳಿಯಲ್ಲಿ ನಡೆದಿದೆ. ಮುಂಜಾನೆ ಎದ್ದು ತನ್ನ ತಾಯಿಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ತಾನು ಪ್ರೀತಿಸಿದ್ದ ಹುಡುಗಿಯೊಂದಿಗೆ ನಿರ್ಜನ ಪ್ರದೇಶದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸತೀಶ್ ಮತ್ತು ಶ್ವೇತ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.

 

ಮನೆಯವರು ತಮ್ಮ ಪ್ರೀತಿಯನ್ನು ವಿರೋಧಿಸಬಹುದು ಎಂದು ಊಹಿಸಿ ಬ್ಯಾಟರಾಯನಹಳ್ಳಿ  ತಾಲೂಕಿನ ಹೊರವಲಯದಲ್ಲಿ ಒಬ್ಬರನ್ನೊಬ್ಬರು ತಬ್ಬಿಕೊಂಡು ರೈಲಿಗೆ ತಲೆಕೊಟ್ಟಿದ್ದಾರೆ.

ಆಗಿದ್ದೇನು?

ಶೆಟ್ಟಹಳ್ಳಿ ಗ್ರಾಮದ ಸತೀಶ್ (18) ಪಣಮಾಕನಹಳ್ಳಿ ಶ್ವೇತ (17) ಮೃತ ಪ್ರೇಮಿಗಳು. ಶ್ವೇತ ಅಪ್ರಾಪ್ತೆಯಾಗಿದ್ದು, ಇಬ್ಬರೂ ಬೇರೆ ಬೇರೆ ಜಾತಿಗೆ ಸೇರಿದವರು. ಪ್ರೀತಿಗೆ ಮನೆಯವರು ಒಪ್ಪಿಗೆ ನೀಡುವುದಿಲ್ಲ ಎಂದು ತಿಳಿದುಇಬ್ಬರೂ ಆತ್ಮಹತ್ಯಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಸದ್ಯ ಇಬ್ಬರ ಪ್ರೀತಿಯ ಬಗ್ಗೆ ಎರಡು ಕುಟುಂಬದವರು ನಮಗೆ ಮಾಹಿತಿ ಇಲ್ಲ ಎಂದು ಹೇಳುತ್ತಿದ್ದಾರೆ. ಶ್ವೇತ ಮಾಲೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಇತ್ತೀಚೆಗೆ ಕಾಲೇಜಿಗೂ ಹೋಗುತ್ತಿರಲಿಲ್ಲ ಎನ್ನಲಾಗಿದೆ. ಆದರೆ ಮೃತ ಶ್ವೇತ ತಂದೆ ತಾಯಿ ಅವರ ಪ್ರೀತಿಯ ವಿಷಯ ನಮಗೆ ತಿಳಿದಿರಲಿಲ್ಲ ಎಂದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ