Breaking News

ತುಮಕೂರು ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು.;V. SOMANNA

Spread the love

ನವದೆಹಲಿಯಲ್ಲಿಂದು ಮಾನ್ಯ ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ತುಮಕೂರು ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು.

ಈ ವೇಳೆ, ಸ್ಮಾರ್ಟ್ ಸಿಟಿ ತುಮಕೂರು ನಗರದ ಬೈಪಾಸ್ ನಿರ್ಮಾಣ ಹಂತ 02ರ ಮಲ್ಲಸಂದ್ರ (NH-73) ಯಿಂದ ವಸಂತನರಸಾಪುರ (NH-48) ದವರೆಗೆ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಕಾರ್ಯಸಾಧ್ಯತೆಯನ್ನು (Alignment) ಮರುಪರಿಶೀಲಿಸಲು ಅಥವಾ ತಾಂತ್ರಿಕ ತಜ್ಞರ ತಂಡವನ್ನು ನಿಯೋಜಿಸಲು ಸಂಬಂಧಪಟ್ಟವರಿಗೆ ನಿರ್ದೇಶಿಸಲು ಮಾನ್ಯ ಸಚಿವರಲ್ಲಿ ಕೋರಲಾಯಿತು.

ಹಾಗೆಯೇ, ತುಮಕೂರು – ಕೊರಟಗೆರೆ – ಮಧುಗಿರಿ – ಪಾವಗಡ – ರಾಯದುರ್ಗ – ಬಳ್ಳಾರಿ (225 ಕಿಮೀ) ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಬೇಕೆಂದು ವಿನಂತಿಸಿಕೊಳ್ಳಲಾಯಿತು.

288 ಕಿಮೀ. ಉದ್ದದ 13,139 ಕೋಟಿ ರೂ. ವೆಚ್ಚದ ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ನಿವಾರಿಸಲು ಭಾರತ್ ಮಾಲಾ ಯೋಜನೆಯಡಿ ನಿರ್ಮಿಸಲು ಉದ್ದೇಶಿಸಲಾದ ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ದಾಬಸ್‌ಪೇಟೆ-ದೊಡ್ಡಬಳ್ಳಾಪುರ – ಹೊಸಕೋಟೆ ಸಂಪರ್ಕಿಸುವ 143.172 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ. ಇನ್ನುಳಿದ ದಾಬಸ್ʼಪೇಟೆ – ಮಾಗಡಿ – ರಾಮನಗರ – ಕನಕಪುರ – ಮುದಗದಪಲ್ಲಿ ವಿಭಾಗವನ್ನು ಸಂಪರ್ಕಿಸುವ 144 ಕಿ.ಮೀ. ಉದ್ದದ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆಯನ್ನು ಅನುಮೋದಿಸಲಾಗಿದ್ದು, ಭೂಮಾಲೀಕರಿಗೆ ಪರಿಹಾರ ವಿತರಣೆ ಬಾಕಿ ಇದೆ. ಸುಮಾರು 150 ಹಳ್ಳಿಗಳ ವ್ಯಾಪ್ತಿಯ ಭೂಮಾಲೀಕರಿಗೆ ಪರಿಹಾರ ಬಿಡುಗಡೆ ಮಾಡಬೇಕು ಹಾಗೂ ಬಾಕಿ ಕಾಮಗಾರಿಯನ್ನು ಶೀಘ್ರವೇ ಆರಂಭಿಸಬೇಕೆಂದು ಮನವಿ ಮಾಡಿಕೊಳ್ಳಲಾಯಿತು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ