Breaking News

ರಾಯಚೂರು ಬಳಿ ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವನ ಕಾಲು ಮುರಿತ, ಹಲವು ಪ್ರಯಾಣಿಕರಿಗೆ ಗಾಯ

Spread the love

ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿದ್ದು, ಓರ್ವ ಪ್ರಯಾಣಿಕನ ಕಾಲು ಮುರಿದಿದೆ. ಇನ್ನು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ.

ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಬಸ್ ಇದಾಗಿದೆ. ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್​ ಅನ್ನು ಎಡಕ್ಕೆ ತಿರುವಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ ಎಂದು ಹೇಳಲಾಗುತ್ತಿದೆ. ಬಸ್ಸಿನಲ್ಲಿ ಚಾಲಕ, ನಿರ್ವಾಹಕ ಸೇರಿ 16 ಜನರಿದ್ದರು.ಬಸ್ ಪಲ್ಟಿಯಿಂದ ಬಸ್​ನಲ್ಲಿ ಓರ್ವ ಪ್ರಯಾಣಿಕನ ಕಾಲು ಸಿಲುಕಿ ಒದ್ದಾಡಿದ್ದಾನೆ. ಪೊಲೀಸರು, ಸ್ಥಳೀಯರ ಸಹಾಯದಿಂದ ಪ್ರಯಾಣಿಕನನ್ನು ಹೊರತೆಗೆದು ಆಂಬ್ಯುಲೆನ್ಸ್ ಮೂಲಕ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಅಲ್ಲದೇ‌ ಬಸ್‌ನಲ್ಲಿದ್ದ ಸುಮಾರು 8 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ