Breaking News

ನಾಪತ್ತೆ ಪ್ರಕರಣಗಳ ತನಿಖೆಗೆ ಆಧಾರ್​ ಕಾರ್ಡ್​ ವಿವರ ನೀಡಲು ಯುಐಡಿಎಐಗೆ ಹೈಕೋರ್ಟ್​ ನಿರ್ದೇಶನ

Spread the love

ಬೆಂಗಳೂರು : ನಾಪತ್ತೆಯಾಗಿರುವ ವ್ಯಕ್ತಿಯನ್ನು ದೂರಿನ ತನಿಖೆಗಾಗಿ ಆತ ಕೊನೆಯ ಬಾರಿ ಆಧಾರ್‌ ಕಾರ್ಡ್‌ ಬಳಕೆ ಮಾಡಿದ್ದ ಸ್ಥಳದ ವಿವರಗಳನ್ನು ಒದಗಿಸುವಂತೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (UIDAI)ಗೆ ಹೈಕೋರ್ಟ್​ ನಿರ್ದೇಶನ ನೀಡಿದೆ.

ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದ ಕೃಷ್ಣಮೂರ್ತಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರಿದ್ದ ಧಾರವಾಡ ಪೀಠ ಈ ಆದೇಶ ನೀಡಿದೆ.

ತನಿಖೆಯ ವೇಳೆ ಪೊಲೀಸ್​ ಇಲಾಖೆ ಅಧಿಕಾರಿಗಳಾಗಲಿ ಅಥವಾ ಇತರೆ ಯಾವುದೇ ಸಂಸ್ಥೆಯಾಗಲಿ ದೃಢೀಕರಣ ಸೇರಿದಂತೆ ಆಧಾರ್‌ ಅನ್ನು ಬಳಕೆ ಮಾಡಬೇಕಾಗಿ ಬಂದರೆ ಅಂತಹ ಸಂದರ್ಭಗಳಲ್ಲಿ ಆಧಾರ್‌ ಕಾಯ್ದೆ 2016ರ ಸೆಕ್ಷನ್‌ 33ರ ಅನ್ವಯ ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸಬೇಕು.

ಈ ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಬಳಿಕ ಹೈಕೋರ್ಟ್​, ಯುಐಡಿಎಐಗೆ ಆಧಾರ್‌ ವಿವರಗಳನ್ನು ಬಳಸಿಕೊಳ್ಳಲು ಮತ್ತು ಅದನ್ನು ಕೊನೆಯದಾಗಿ ಯಾವ ಸ್ಥಳದಲ್ಲಿ ಬಳಕೆ ಮಾಡಲಾಗಿದೆ ಎಂಬ ವಿವರಗಳನ್ನು ಒದಗಿಸಲು ಸೂಕ್ತ ಆದೇಶಗಳನ್ನು ಹೊರಡಿಸಲು ಸಮಯ ಮತ್ತು ಅವಕಾಶ ನೀಡುವ ಮೂಲಕ ಆದೇಶಗಳನ್ನು ನೀಡಲಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ