Breaking News

ಸಿಲಿಂಡರ್​ ಸ್ಫೋಟಕ್ಕೆ ಮನೆ ಧ್ವಂಸ; 8 ಮಂದಿಗೆ ಗಾಯ

Spread the love

ವಿಜಯನಗರ: ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಇಂದು ಬೆಳಗ್ಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸ್ಫೋಟಕ್ಕೆ ಮನೆ ಕುಸಿದು ಬಿದ್ದಿದೆ. ಮನೆಯ ಯಜಮಾನಿ ಕವಿತಾ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಹೊಸಪೇಟೆ ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆ ಇದು. ಮನೆಯಲ್ಲಿ ಸುಮಾರು 10 ಮಂದಿ ಇದ್ದರು. ಬೆಳಗ್ಗೆ ಅಡುಗೆ ಅನಿಲ ಸೋರಿಕೆಯ ವಾಸನೆ ಬರುತ್ತಿತ್ತು ಎಂದು ಹೇಳಲಾಗುತ್ತಿದೆ. ಬೆಳಗ್ಗೆ ಸ್ಟವ್‌ ಉರಿಸಲು ಕವಿತಾ ಅವರು ಹೋದಾಗ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಸ್ಫೋಟದಿಂದ ಮನೆ ಶೇ 60ರಷ್ಟು ಧ್ವಂಸವಾಗಿದೆ. ಕವಿತಾ (32), ಹಾಲಪ್ಪ (42), ಗಂಗಮ್ಮ (63), ಮೈಲಾರಪ್ಪ (48), ಮಲ್ಲಮ್ಮ (40), ಕಾವೇರಿ (18), ಕಾವ್ಯ (15), ನಿಖಿಲ್ (13) ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ