Breaking News

ಮೈಸೂರು ದಸರಾ: ಸಹಸ್ರಾರು ಪ್ರೇಕ್ಷಕರ ಮನಗೆದ್ದ ಡ್ರೋನ್ ಶೋ

Spread the love

ಮೈಸೂರು: ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೋಮವಾರವೂ ಸಹ ಡ್ರೋನ್ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿತು. ಬಾನಂಗಳದಲ್ಲಿ ಸಹಸ್ರಾರು ಡ್ರೋನ್​ಗಳು ಅತ್ಯಾಕರ್ಷಕ ಚಿತ್ತಾರ ಬಿಡಿಸಿ ನೋಡುಗರ ಕಣ್ಮನ ಸೆಳೆದವು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ನಿಮಿತ್ತ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಆಯೋಜಿಸಲಾಗಿದ್ದ ಎರಡನೇ ದಿನದ ಡ್ರೋನ್ ಪ್ರದರ್ಶನಕ್ಕೆ ಪ್ರೇಕ್ಷಕರಿಂದ‌ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಸಾವಿರಾರು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿದ್ದ ಪಂಜಿನ ಕವಾಯತು ಮೈದಾನದಲ್ಲಿ ಬರೋಬ್ಬರಿ ‌3,000 ಡ್ರೋನ್​ಗಳು ಆಗಸದಲ್ಲಿ ವಿವಿಧ ಕಲಾಕೃತಿಗಳ ಬಣ್ಣ ಬಣ್ಣದ ಚಿತ್ತಾರಗಳನ್ನು ಬಿಡಿಸುವ ಮೂಲಕ ಎಲ್ಲರನ್ನು ರೋಮಾಂಚನಗೊಳಿಸಿದವು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ