ಚಾಮರಾಜನಗರ : ವಿಶ್ವವಿಖ್ಯಾತ ಮೈಸೂರು ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದ್ದು, ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಟಿ ಕಾಳಗಕ್ಕೆ ಆಯ್ಕೆಯಾಗಿರುವ ಚಾಮರಾಜನಗರದ ಮಹೇಶ್ ನಾರಾಯಣ ಜಟ್ಟಿ ಅವರು ನಿತ್ಯವೂ ಬೆವರು ಹರಿಸುತ್ತಿದ್ದಾರೆ.
ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ಮೈನವಿರೇಳಿಸುವ ವಜ್ರಮುಷ್ಟಿ ಕಾಳಗಕ್ಕೆ ಚಾಮರಾಜನಗರದ ಮಹೇಶ್ ನಾರಾಯಣ ಜಟ್ಟಿ ಸಜ್ಜುಗೊಂಡಿದ್ದಾರೆ. ಕಳೆದ 20 ದಿನಗಳಿಂದ ಚಾಮರಾಜನಗರದ ದೊಡ್ಡ ಗರಡಿಯಲ್ಲಿ ತರಬೇತುದಾರ ಪುಟ್ಟಣ್ಣ ಜಟ್ಟಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಈ ಹಿಂದೆ 1 ಬಾರಿ ಮುಷ್ಟಿ ಕಾಳಗದಲ್ಲಿ ಭಾಗವಹಿಸಿರುವ ಅನುಭವ ಇವರಿಗಿದೆ.
ಮಹೋತ್ಸವದಲ್ಲಿ ವಜ್ರಮುಷ್ಟಿ ಕಾಳಗಕ್ಕೆ ಅತ್ಯಂತ ಮಹತ್ವವಿದೆ. ವಿಜಯದಶಮಿ ದಿನ ನಡೆಯುವ ಜಂಬೂ ಸವಾರಿಗೂ ಮೊದಲು ರಾಜ ಮನೆತನದವರ ಸಮ್ಮುಖದಲ್ಲಿ ಈ ಕಾಳಗ ನಡೆಯುತ್ತದೆ. ಸಂಪ್ರದಾಯದ ಉದ್ದೇಶದಿಂದ ನಡೆಯುವ ಈ ಕಾಳಗ ಕೆಲವೇ ಸೆಕೆಂಡುಗಳಲ್ಲಿ ಮುಗಿಯುತ್ತದೆ. ಆದರೂ ಈ ಕಾಳಗವನ್ನು ವೀಕ್ಷಿಸಲು ಜನರ ದಂಡೇ ನೆರೆಯುತ್ತದೆ.
Laxmi News 24×7