Breaking News

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲೂ ಇನ್ಮುಂದೆ ಮಾರ್ಷಲ್‌ಗಳು

Spread the love

ಹುಬ್ಬಳ್ಳಿ: ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯ ನಿರ್ವಹಿಸುವುದನ್ನು ನೋಡಿದ್ದೇವೆ‌. ಅದೇ ಮಾದರಿಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲೂ ಇನ್ಮುಂದೆ ಮಾರ್ಷಲ್‌ಗಳು ನಿರ್ವಹಿಸಲಿದ್ದಾರೆ.

ರಾಜ್ಯದ 2ನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಖ್ಯಾತಿ ಪಡೆದಿರುವ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯಲ್ಲಿ ಇದೇ ಮೊದಲ ಬಾರಿಗೆ ಮಾರ್ಷಲ್‌ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. 8 ಮಹಿಳೆಯರು ಹಾಗೂ 10 ಪುರುಷ ಮಾರ್ಷಲ್‌ಗಳನ್ನು ಪಾಲಿಕೆ ಕಲಾಪ ನಿರ್ವಹಣೆಗೆ ನೇಮಿಸಿಕೊಳ್ಳಲಾಗಿದೆ.ಸುಗಮ ಕಲಾಪ ನಡೆಸಲು ಮಾರ್ಷಲ್​ಗಳು ಅಗತ್ಯವಾಗಿಬೇಕು. ಪಾಲಿಕೆ ಸದಸ್ಯರಿಗೆ ಕಲಾಪದ ವೇಳೆ ಅಗತ್ಯ ದಾಖಲೆಗಳನ್ನು ಪೂರೈಸುವುದು, ಗಲಾಟೆಗಳು ಸಂಭವಿಸಿದಾಗ ನಿಯಂತ್ರಿಸುವುದು, ಗಲಾಟೆ ಮಾಡುವ ಸದಸ್ಯರನ್ನು ಹೊರಗೆ ಹಾಕುವುದು ಸೇರಿದಂತೆ ಮೇಯರ್ ಮತ್ತು ಉಪ ಮೇಯರ್ ಅವರು ನೀಡುವ ಆದೇಶಗಳನ್ನು ಇವರು ಪಾಲನೆ ಮಾಡುತ್ತಾರೆ.

ಈ ರೀತಿ ಮಾರ್ಷಲ್​ಗಳನ್ನು ನೇಮಕ ಮಾಡಿರುವುದು ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯೇ ಮೊದಲು ಎನ್ನುವುದು ವಿಶೇಷ. ಪಾಲಿಕೆ ಅಧಿಕಾರಿಗಳಾದ ಶಂಕರಾನಂದ ಬನಶಂಕರಿ ಸೇರಿದಂತೆ ಹಿರಿಯ ಅಧಿಕಾರಿಗಳು ಮಾರ್ಷಲ್‌ಗಳಿಗೆ ವಿಶೇಷ ತರಬೇತಿ ನೀಡಿ ಸಜ್ಜುಗೊಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ