Breaking News

ರೌಡಿಶೀಟರ್ ಸೈಫುದ್ದೀನ್ ಕೊಲೆ ಪೂರ್ವ ನಿಯೋಜಿತ ಕೃತ್ಯ: ಉಡುಪಿ ಎಸ್ಪಿ ಹರಿರಾಂ ಶಂಕ‌ರ್

Spread the love

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದ ರೌಡಿಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಬಂಧಿತ ಮೂವರು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಬಂಧಿತ ಮೂವರು ಆರೋಪಿಗಳಾದ ಮೊಹಮದ್ ಫೈಸಲ್ ಖಾನ್, ಮೊಹಮದ್ ಶರೀಫ್ ಮತ್ತು ಅಬ್ದುಲ್ ಶುಕೂರು ಯಾನೆ ಅದ್ದು ಎಂಬುವನನ್ನು ಪ್ರಕರಣದ ತನಿಖಾಧಿಕಾರಿ, ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಭದ್ರತೆಯಲ್ಲಿ ಸೋಮವಾರ ಉಡುಪಿ ಸಿನೀಯರ್ ಸಿವಿಲ್ ಜಡ್ಜ್ ಹಾಗೂ ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ತನಿಖಾಧಿಕಾರಿಗಳು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ, ನ್ಯಾಯಾಧೀಶ ಪುರುಷೋತ್ತಮ್ ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ, ಅ.4ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶ ನೀಡಿದರು. ಅದರಂತೆ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು, ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ ಎಂದು ಎಸ್​ಪಿ ಹರಿರಾಂ ಶಂಕ‌ರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ