Breaking News

ಕಾರ್ಖಾನೆಯ ಪುನಶ್ಚೇತನ ಕುರಿತು ಚರ್ಚೆ ನಡೆಸಿದ ನೂತನ ನಿರ್ದೇಶಕರು

Spread the love

ಕಾರ್ಖಾನೆಯ ಪುನಶ್ಚೇತನ ಕುರಿತು ಚರ್ಚೆ ನಡೆಸಿದ ನೂತನ ನಿರ್ದೇಶಕರು
ಎಂ.ಕೆ.ಹುಬ್ಬಳ್ಳಿ:ಎಂ.ಕೆ. ಹುಬ್ಬಳ್ಳಿಯ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಯಾದ ಪ್ಯಾನಲ್‌ನ ನಿರ್ದೇಶಕರು ಮಂಗಳವಾರ ಸಭೆ ಸೇರಿ ಕಾರ್ಖಾನೆಯ ಪ್ರಸ್ತುತ ಸ್ಥಿತಿ ಮತ್ತು ಪುನಶ್ಚೇತನ ಕುರಿತು ಚರ್ಚಿಸಿದರು.
ನೂತನ ನಿರ್ದೇಶಕರೂ ಆಗಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಸಭೆ ನಡೆಯಿತು.
ಮೊದಲು ವಿಘ್ನ ವಿನಾಶಕ ಶ್ರೀ ಗಣಪತಿ ಹಾಗೂ ಈ ಭಾಗದ ಶಕ್ತಿದೇವತೆ ಶ್ರೀ ಬಂಡೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯಲಾಯಿತು.
ನಂತರ ಕಾರ್ಖಾನೆಯ ಎಲ್ಲ ವಿಭಾಗಗಳಿಗೆ ತೆರಳಿ ಪ್ರಸ್ತುತ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಲಾಯಿತು.
ಮುಂದಿನ ಹಂಗಾಮಿಗೆ ಸಂಬಂಧಿಸಿದಂತೆ ಸಮಗ್ರ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ನಡೆಸಿ, ಕಾರ್ಖಾನೆಯ ಪುನಶ್ಚೇತನದ ಕುರಿತಂತೆ ಚರ್ಚಿಸಲಾಯಿತು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ