ಬೆಂಗಳೂರು : ಗ್ಯಾರಂಟಿ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲು ಹೋಗಿ ಇಂದು ರಾಜ್ಯ ಬರಡಾಗಿದೆ. ಹಣಕಾಸಿನ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಆರೋಪಿಸಿದ್ದಾರೆ. ಜೆ. ಪಿ. ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಮಾತನ್ನು ನಾನು ಹೇಳುತ್ತಿಲ್ಲ. ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಅವರಲ್ಲೇ ಗೊಂದಲ ಇದೆ. ದುಡ್ಡಿಲ್ಲ ದುಡ್ಡಿಲ್ಲ ಅಂತಿದ್ದಾರೆ. ಸರ್ಕಾರ ಇಂಥ ಅತಿವೃಷ್ಟಿ ಬಂದಾಗ ತನ್ನ ಸಂಪನ್ಮೂಲದಿಂದ ಸಂಕಷ್ಟಕ್ಕೀಡಾದ ಜನರಿಗೆ ಶಕ್ತಿ ಮೀರಿ ಸಹಾಯ ಮಾಡುವ ಜವಾಬ್ದಾರಿ ಹೊಂದಿದೆ. ಆದರೆ, ಅವರಲ್ಲಿ ಗೊಂದಲ ಇದೆ ಎಂದು ಟೀಕಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಆತಂಕ ಇಲ್ಲ : ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿನ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ಕಾರಣಕ್ಕೂ ಆತಂಕ ಇಲ್ಲ. ಆ ಮೈತ್ರಿ ಮುಂದುವರಿಯುತ್ತದೆ. ಜಿಲ್ಲಾ ಪಂಚಾಯತ್ ಚುನಾವಣೆಯಾಗಲಿ, ತಾಲೂಕು ಪಂಚಾಯತ್ ಚುನಾವಣೆಯಾಗಲಿ, ವಿಧಾನಸಭೆ ಚುನಾವಣೆ ಆಗಲಿ ಮೈತ್ರಿಗೆ ಎಂದೂ ಆತಂಕ ಇಲ್ಲ. ಪ್ರಧಾನಿ ಮೋದಿ ಮತ್ತು ನನ್ನ ಸಂಬಂಧ ಯಾವುದೇ ಕಾರಣಕ್ಕೂ ಯಾರೂ ಕೂಡ ಬದಲಾವಣೆ ಮಾಡಲು ಆಗುವುದಿಲ್ಲ. ಎಂದಿಗೂ ನಾನು ಪ್ರಧಾನಿ ಮೋದಿ ಬಗ್ಗೆ ಲಘುವಾಗಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.
Laxmi News 24×7