Breaking News

ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು.

Spread the love

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ನಿರ್ಮಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಉಪಕರಣಗಳನ್ನು, ಜೊತೆಗೆ ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಡಿ ನಿರ್ಮಿಸಲಾದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ನಗರ ಸಾರಿಗೆ ಬಸ್ ನಿಲ್ದಾಣವನ್ನು ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ನಿರ್ಮಿಸಲಾದ ಪಿ.ಎಂ. ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿಶ್ವವಿದ್ಯಾಲಯದ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆಯೂ ನೆರವೇರಿತ್ತು.
ಬೆಳಗಾವಿ ಜಿಲ್ಲೆಯ ಜನತೆಗೆ ಉತ್ತಮ ಸಾರ್ವಜನಿಕ ಸಾರಿಗೆ ಸೌಲಭ್ಯ ಹಾಗೂ ಅತ್ಯಾಧುನಿಕ ಆರೋಗ್ಯ ಸೇವೆಗಳು ದೊರಕುವಂತಾಗಿರುವುದು ನಮ್ಮ ಸರ್ಕಾರದ ಬದ್ಧತೆಯ ಪ್ರತಿಬಿಂಬವಾಗಿದೆ.
ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಕೆಎಲ್ಇ ಸಂಸ್ಥೆಯ ಡಾ.‌ಪ್ರಭಾಕರ ಕೋರೆ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಶಾಸಕರಾದ ರಾಜು ಕಾಗೆ, ಆಸೀಫ್ ಸೇಠ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಹಾಗೂ ಹಲವು ಗಣ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ ಸಂಘ’ದಿಂದ ಪೆನ್-ನೋಟ್’ಬುಕ್ ವಿತರಣೆ!

Spread the love ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ