Breaking News

ಕಾರ್ಯಕರ್ತರಿಗೆ ಇಂದು ಸಂಜೆ ‘ಕಾಂತಾರ’ ಪ್ರದರ್ಶನ: ಇಡೀ ಥಿಯೇಟರ್​ ಬುಕ್​ ಮಾಡಿದ ಪ್ರತಾಪ್ ಸಿಂಹ

Spread the love

ಮೈಸೂರು: ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ – ನಿರ್ದೇಶಕ ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ ಚಾಪ್ಟರ್​ 1’ ಗುರುವಾರದಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಹುಭಾಷೆಗಳಲ್ಲಿ ಬಿಡುಗಡೆ ಆಗಿದೆ. ಎಲ್ಲೆಡೆ ಸಿನಿಮಾ ಸದ್ದು ಜೋರಾಗಿದ್ದು, ಮಾಜಿ ಸಂಸದ ಯಶಸ್ವಿ ಸಿನಿಮಾ ವೀಕ್ಷಿಸಲು ಪ್ರೇಕ್ಷಕರನ್ನು ಆಹ್ವಾನಿಸಿದ್ದಾರೆ.

ಕಾಂತಾರ ಚಾಪ್ಟರ್​ 1 ವೀಕ್ಷಿಸಲು ಟಿಕೆಟ್ ಬುಕ್ ಮಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಪಕ್ಷದ ಕಾರ್ಯಕರ್ತರನ್ನು ಡಿಆರ್‌ಸಿಗೆ ಆಹ್ವಾನಿಸಿದ್ದಾರೆ. ಇಂದು ಸಂಜೆಯ 4 ಗಂಟೆಯ ಶೋಗೆ ಹಾಜರಾಗಲು ತಿಳಿಸಿದ್ದಾರೆ. ಎಲ್ಲರಿಗೂ ಟಿಕೆಟ್ ಬುಕ್ ಮಾಡಿದ್ದೇನೆ, ಬನ್ನಿ ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.

ಟಿಕೆಟ್ಸ್​ ಖರೀದಿಯ ಮಾಹಿತಿ ಹಂಚಿಕೊಂಡ ಪ್ರತಾಪ್ ಸಿಂಹ, ”4 ಗಂಟೆಗೆ ಕಾರ್ಯಕರ್ತರೆಲ್ಲ ಒಡಗೂಡಿ ಕಾಂತಾರ ಚಾಪ್ಟರ್​ 1 ನೋಡೋಣ, DRCಯಲ್ಲಿ ಫುಲ್​​ಸ್ಕ್ರೀನ್ ಬುಕ್ ಮಾಡಿದ್ದೇನೆ” ಎಂದು ಟ್ವೀಟ್​ ಮೂಲಕ ತಿಳಿಸಿದ್ದಾರೆ. ಮೈಸೂರಿನ ಡಿಆರ್‌ಸಿ ಸಿನಿಮಾಸ್‌ನಲ್ಲಿ 68,920 ರೂಪಾಯಿ ನೀಡಿ ಟಿಕೆಟ್ ಖರೀದಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ