Breaking News

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ರಾಜ್ಯದಲ್ಲಿ ಶೇ.76.41 ಪೂರ್ಣ, ಬೆಂಗಳೂರಲ್ಲಿ 1.19 ಲಕ್ಷ ಮನೆಯಲ್ಲಿ ಸಮೀಕ್ಷೆ

Spread the love

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಎರಡು ದಿನಗಳಲ್ಲಿ 1.19 ಲಕ್ಷ ಮನೆಗಳನ್ನು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ.

ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆಯನ್ನು ಶನಿವಾರದಿಂದ ಪ್ರಾರಂಭಿಸಲಾಗಿದೆ. ಈವರೆಗೆ 1.19 ಲಕ್ಷ ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಭಾನುವಾರ 5 ನಗರ ಪಾಲಿಕೆಗಳಲ್ಲಿ ಸಂಜೆ 7 ಗಂಟೆಯವರೆಗೆ 95,024 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ.

ಶನಿವಾರ ಮೊದಲ ದಿನ 24,453 ಮನೆಗಳನ್ನು ಸಮೀಕ್ಷೆ ಮಾಡಲಾಗಿತ್ತು. ಭಾನುವಾರ ಸಂಜೆವರೆಗೆ 95,024 ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಕೇಂದ್ರ ನಗರ ಪಾಲಿಕೆ 14,288 ಮನೆ, ಪೂರ್ವ ನಗರ ಪಾಲಿಕೆ 17,269 ಮನೆ, ಉತ್ತರ ನಗರ ಪಾಲಿಕೆ 31,363 ಮನೆ, ದಕ್ಷಿಣ ನಗರ ಪಾಲಿಕೆ 16,445 ಮನೆ, ಪಶ್ಚಿಮ ನಗರ ಪಾಲಿಕೆಯಲ್ಲಿ 40,112 ಮನೆಗಳ ಸಮೀಕ್ಷೆ ಪೂರ್ಣಗೊಳಿಸಲಾಗಿದೆ.

ರಾಜ್ಯದಲ್ಲಿ ಶೇ.76.41 ಸಮೀಕ್ಷೆ ಪೂರ್ಣ: ರಾಜ್ಯದಲ್ಲಿ ಭಾನುವಾರದವರೆಗೆ ಶೇ.76.41 ರಷ್ಟು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣವಾಗಿದೆ. ರಾಜ್ಯದಲ್ಲಿ ಒಟ್ಟು 1,09,86,580 ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ. ಭಾನುವಾರ ರಾಜ್ಯದಲ್ಲಿ ಒಟ್ಟು 7,03,364 ಮನೆಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.

ಜಿಬಿಎಯಲ್ಲಿನ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ ಕೆ.ಎ.ಎಸ್ ಹಿರಿಯ ಅಧಿಕಾರಿಗಳನ್ನು ನೋಡಲ್‌ ಅಧಿಕಾರಿಗಳೆಂದು ಸರ್ಕಾರ ನೇಮಕ ಮಾಡಿದೆ. ಅದರಂತೆ ಒಟ್ಟು 34 ಕೆ.ಎ.ಎಸ್ ಅಧಿಕಾರಿಗಳು ಸಮೀಕ್ಷಾ ಕಾರ್ಯವನ್ನು ಸುಗಮವಾಗಿ ನಿರ್ವಹಿಸಲು, ಸಮೀಕ್ಷಾದಾರರು ಮತ್ತು ಸರ್ಕಾರದ ಮಧ್ಯೆ ಸಮನ್ವಯತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ವಾರ್ಡ್‌ಗೆ ಒಬ್ಬರಂತೆ ಗ್ರೂಪ್- ಎ ವೃಂದದ ಅಧಿಕಾರಿಗಳನ್ನು ವಾರ್ಡ್ ಮೇಲ್ವಿಚಾರಕರಾಗಿ/ಚಾರ್ಜ್ ಅಧಿಕಾರಿಗಳೆಂದು ನೇಮಿಸಲಾಗಿದ್ದು, ಅವರು ಆ ವಾರ್ಡ್‌ನ ಸಮೀಕ್ಷೆಯ ಸಂಪೂರ್ಣ ಮೇಲ್ವಿಚಾರಣೆಯನ್ನು ನಿರ್ವಹಿಸಲಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ