ರಾಜ್ಯೋತ್ಸವಕ್ಕೆ ಹೆಚ್ಚಿನ ಅನುದಾನ ನೀಡಿ…ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳ ಮೇಲೆ ಕನ್ನಡ ಧ್ವಜ ಹಾರಿಸಿ;
ಕರುನಾಡ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹೆಚ್ಚಿನ ಅನುದಾನ ನೀಡಬೇಕು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಚೇರಿಗಳ ಮೇಲೆ ಕನ್ನಡ ಧ್ವಜವನ್ನು ಕಡ್ಡಾಯವಾಗಿ ಹಾರಿಸಲು ಆದೇಶಿಸಬೇಕೆಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ಕರುನಾಡ ರಕ್ಷಣಾ ವೇದಿಕೆಯೂ ಮನವಿಯನ್ನು ಸಲ್ಲಿಸಿತು.
ಬೆಳಗಾವಿ ನಗರದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಲಕ್ಷಾಂತರ ಕನ್ನಡಿಗರು ಇದರಲ್ಲಿ ಭಾಗಿಯಾಗುತ್ತಾರೆ. ಈ ಹಿನ್ನೆಲೆ ಈ ಉತ್ಸವವನ್ನು ಇನ್ನಷ್ಟು ವಿಜೃಂಭಣೆಯಿಂದ ಆಚರಿಸಲು ಹೆಚ್ಚಿನ ಅನುದಾನವನ್ನು ನೀಡಬೇಕು. ಅಲ್ಲದೇ ಕೇಂದ್ರ ಸರ್ಕಾರಕ್ಕೊಳಪಡುವ ಎಲ್ಲ ಕಚೇರಿಗಳಲ್ಲಿ ಮತ್ತು ರಾಜ್ಯ ಸರ್ಕಾರದ ಎಲ್ಲ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಧ್ವಜವನ್ನು ಹಾರಿಸಬೇಕು ಎಂಬ ಆದೇಶ ಜಾರಿಗೊಳಿಸುವಂತೆ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ, ಮಲ್ಲೇಶಿ ಸೇರಿದಂತೆ ಕರುನಾಡ ರಕ್ಷಣಾ ವೇದಿಕೆಯ ಇನ್ನುಳಿದ ಕಾರ್ಯಕರ್ತರು ಭಾಗಿಯಾಗಿದ್ಧರು.
Laxmi News 24×7