Breaking News

ಸಿನಿಮಾ ಮಾಡುವುದಾಗಿ ನಂಬಿಸಿ ನಟಿಗೆ ಲೈಂಗಿಕ ಕಿರುಕುಳ

Spread the love

ಬೆಂಗಳೂರು: ಸಿನಿಮಾ ಮಾಡುವುದಾಗಿ ನಂಬಿಸಿ ನಟಿಗೆ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪಿಯನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣೇಶ್ವರಿನಗರ ನಿವಾಸಿ ಹೇಮಂತ್ ಕುಮಾರ್‌ (34) ಬಂಧಿತ. ಕಿರುತೆರೆ ನಟಿ ಹಾಗೂ ಬಿಗ್‌ಬಾಸ್​​ನ ಓಟಿಟಿ ಸ್ಪರ್ಧಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಿರುತೆರೆಯಲ್ಲಿ ನಟಿಸುತ್ತಿರುವ ನಟಿಗೆ 2022ರಲ್ಲಿ ನಿರ್ದೇಶಕ, ನಿರ್ಮಾಪಕ ಎಂದು ಹೇಳಿಕೊಂಡು ಪರಿಚಯವಾದ ಆರೋಪಿ ತಾನು ರಿಚ್ಚಿ ಎಂಬ ಸಿನಿಮಾ ಮಾಡುತ್ತಿದ್ದು, ಅದರಲ್ಲಿ ನೀವು ನಾಯಕಿಯಾಗಿ ನಟಿಸಬೇಕು ಎಂದು ನಟಿಗೆ ಹೇಳಿದ್ದಾನೆ. ಅದಕ್ಕೆ ಒಪ್ಪಿಕೊಂಡ ನಟಿಗೆ 2 ಲಕ್ಷ ರೂ. ಸಂಭಾವನೆ ನೀಡುತ್ತೇನೆಂದು ಒಪ್ಪಂದ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ.

ಮುಂಗಡವಾಗಿ ನನಗೆ 60 ಸಾವಿರ ರೂ. ಕೊಡಲಾಗಿತ್ತು. ಅದರಂತೆ ಚಿತ್ರೀಕರಣ ಆರಂಭವಾಗಿತ್ತು. ಆದರೆ, ಕಾರಣಾಂತರಗಳಿಂದ ಆರೋಪಿ ಸಿನಿಮಾ ಚಿತ್ರೀಕರಣವನ್ನು ಮುಂದೂಡಿದ್ದ. ಬಳಿಕವೂ ಸಿನಿಮಾದಲ್ಲಿ ನಟಿಸುತ್ತಿದ್ದೆ. ಆದರೆ, ಅಶ್ಲೀಲ ಬಟ್ಟೆ ತೊಡಬೇಕು, ಅಶ್ಲೀಲವಾಗಿ ನಟಿಸಬೇಕು ಎಂದು ಒತ್ತಾಯಿಸಿದ್ದರು. ಅಲ್ಲದೆ, ಅಸಭ್ಯ ರೀತಿಯಲ್ಲಿ ಸ್ಪರ್ಶಿಸುತ್ತಿದ್ದರು. ಒಪ್ಪಂದದ ಅವಧಿ ಮುಗಿದಿದ್ದರಿಂದ ಸಿನಿಮಾ ಚೇಂಬರ್‌ ಸಮ್ಮುಖದಲ್ಲಿ ಅವಧಿ ವಿಸ್ತರಣೆ ಮಾಡಿ ಸಿನಿಮಾ ಪೂರ್ತಿಗೊಳಿಸಿದ್ದೇನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ