Breaking News

ಕುರುಬರನ್ನ ಎಸ್​​ಟಿಗೆ ಸೇರ್ಪಡೆಗೆ ಉಗ್ರಪ್ಪ ಉಗ್ರಾವತಾರ, ಎಲ್ಲಾ ಗೊಂದಲಗೆ ತೆರೆ ಎಳೆದ ಸಿಎಂ

Spread the love

ಬೆಂಗಳೂರು, (ಅಕ್ಟೋಬರ್ 07): ವಿಧಾನಸೌಧದಲ್ಲಿ ಇಂದು ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ (Valmiki Jayanti) ಕಾರ್ಯಕ್ರಮದಲ್ಲಿ ಕುರುಬ ಸಮುದಾಯವನ್ನು ಎಸ್​​ಟಿ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಕುರುಬ ಸಮುದಾಯವನ್ನು ಎಸ್​ಟಿಗೆ ಸೇರಿಸಿದರೆ ಸುಮ್ಮನ ಇರುವುದಿಲ್ಲ ಎಂದು ಕಾರ್ಯಕ್ರಮದಲ್ಲೇ ಮಾಜಿ ಸಂಸದ ವಿ.ಎಸ್. ಉಗ್ರಪ್ಪ (V.S Ugrappa) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆಯೇ ಗುಡುಗಿದ್ದಾರೆ. ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ (Siddaramaiah), ಕುರುಬರನ್ನು ಪರಿಶಿಷ್ಟ ಜಾತಿ (ಎಸ್‌ಟಿ) ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ, ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಸರ್ಕಾರ ಕೇಳಿದ್ದು ಅದಷ್ಟೇ ನಮ್ಮೆದುರಿಗಿದೆ. ಒಂದು ವೇಳೆ ಕುರುಬರನ್ನು ಎಸ್‌ಟಿಗೆ ಸೇರಿಸುವುದಾದರೆ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ ಎಂದು ಸ್ಪಷ್ಟಪಡಿಸಿದರು.

ಈಗ ಕುರುಬರನ್ನು ಎಸ್‌ಟಿಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಮುಖ್ಯಮಂತ್ರಿಯಾಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಸರ್ಕಾರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ