Breaking News

ಜಾಲಿವುಡ್ ಸ್ಟುಡಿಯೋ ತಪ್ಪು ಸರಿಪಡಿಸಿಕೊಳ್ಳಲು ಅವಕಾಶ ನೀಡುವಂತೆ ಡಿಸಿಎಂ ಡಿಕೆಶಿ ಸೂಚನೆ: ಬಿಗ್ ಬಾಸ್ ಪುನಾರಂಭ?

Spread the love

ಬೆಂಗಳೂರು: ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ವೀಕ್ಷಕರಿಗೆ ಸಂತಸದ ಸುದ್ದಿ ಸಿಕ್ಕಿದೆ. ”ಆಗಿರುವ ತಪ್ಪನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಬೇಕು. ಈ ಕುರಿತು ಜಿಲ್ಲಾಧಿಕಾರಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರೊಂದಿಗೆ ಮಾತನಾಡಿದ್ದೇನೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಬಿಗ್ ಬಾಸ್ ಕಾರ್ಯಕ್ರಮ ಪುನಾರಂಭಗೊಳ್ಳುವ ಸಾಧ್ಯತೆ ಇದೆ.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ”ಬಿಗ್ ಬಾಸ್ ಕಾರ್ಯಕ್ರಮ ನಡೆಯುವ ಜಾಲಿವುಡ್ ಸ್ಟುಡಿಯೋವನ್ನು ಉದ್ಘಾಟನೆ ಮಾಡಿದ್ದೇ ನಾನು. ಅಲ್ಲಿ ಏನಾಗಿದೆ ಎಂಬ ಬಗ್ಗೆ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ. ಜೊತೆಗೆ ಉದ್ಯೋಗ ಮುಖ್ಯ ಎಂದೂ ಹೇಳಿದ್ದೇನೆ. ಖಾಸಗಿಯವರು ಹೂಡಿಕೆ ಮಾಡಿರುತ್ತಾರೆ. ಇದಕ್ಕೆ ಏನು ಪರಿಹಾರ ಕಂಡುಕೊಳ್ಳಬಹುದೋ ಅದಕ್ಕೆ ಅವಕಾಶ ನೀಡಿ ಎಂದೂ ತಿಳಿಸಿದ್ದೇನೆ. ಬಿಗ್ ಬಾಸ್ ಒಂದೇ ಅಲ್ಲ. ಎಲ್ಲಾ ಮನರಂಜನಾ ಕಾರ್ಯಕ್ರಮಗಳೂ ನಡೆಯಬೇಕು” ಎಂದರು.

“ಜಾಲಿವುಡ್ ಸ್ಟುಡಿಯೋದವರು ಮಾಲಿನ್ಯ ನಿಯಮಗಳನ್ನು ಪಾಲಿಸಿಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿತ್ತು. ಅದರ ಆದೇಶದಂತೆ ಈಗ ಕ್ರಮ ತೆಗೆದುಕೊಳ್ಳಲಾಗಿದೆ. ಅಧಿಕಾರಿಗಳು ಕಾನೂನಾತ್ಮಕವಾಗಿ ಕೆಲಸ ಮಾಡಿದ್ದಾರೆ. ಈ ವಿಚಾರಗಳನ್ನು ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡೆ” ಎಂದು ಹೇಳಿದರು.

ನನ್ನನ್ನು ನೆನಪಿಸಿಕೊಳ್ಳದಿದ್ದರೆ ಹೆಚ್​ಡಿಕೆಗೆ ನಿದ್ದೆ ಬರಲ್ಲ: ನಟ್ಟು ಬೋಲ್ಟ್ ಟೈಟ್ ಎಂದು ಜೆಡಿಎಸ್ ಹಾಗೂ ಕುಮಾರಸ್ವಾಮಿ ಅವರು ಎಕ್ಸ್ (ಟ್ವೀಟ್) ಮಾಡಿರುವ ಬಗ್ಗೆ ಕೇಳಿದಾಗ, “ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಕುಮಾರಸ್ವಾಮಿ ಅವರಾದರೂ ಮಾಡಿಕೊಳ್ಳಲಿ, ಮೇಲಿನಿಂದ ಯಾರನ್ನಾದರೂ ಕರೆದುಕೊಂಡಾದರೂ ಬಂದು ಮಾಡಿಕೊಳ್ಳಲಿ. ಈ ವಿಚಾರದಲ್ಲಿ ಜೆಡಿಎಸ್ ಹಾಗೂ ಕುಮಾರಸ್ವಾಮಿ ಅವರು ರಾಜಕೀಯ ಮಾಡುತ್ತಿದ್ದಾರೆ. ಪ್ರತಿದಿನ ನನ್ನನ್ನು, ನನ್ನ ಹೆಸರನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ (ಕುಮಾರಸ್ವಾಮಿ) ನೆಮ್ಮದಿ, ನಿದ್ದೆ ಹಾಗೂ ಯಾವುದಕ್ಕೂ ಶಕ್ತಿ ಬರುವುದಿಲ್ಲ” ಎಂದು ಲೇವಡಿ ಮಾಡಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ