ಬೆಂಗಳೂರು: ಮಾದಕ ದಂಧೆಕೋರರ ವಿರುದ್ಧದ ಸಮರವನ್ನು ಮತ್ತಷ್ಟು ಚುರುಗೊಳಿಸಿರುವ ಬೆಂಗಳೂರು ನಗರ ಪೊಲೀಸರು ಪ್ರಸಕ್ತ ವರ್ಷ 81.21 ಕೋಟಿ ರೂಪಾಯಿ ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.
2025ರ ಅಕ್ಟೋಬರ್ 8ರ ವರೆಗಿನ ಅಂಕಿಅಂಶಗಳ ಪ್ರಕಾರ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದವರ ವಿರುದ್ಧ 711 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, 1,013 ಭಾರತೀಯ ಹಾಗೂ 35 ವಿದೇಶಿ ಮೂಲದ ಆರೋಪಿಗಳ ಸಹಿತ 1,048 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟೂ 1483.30 ಕೆ.ಜಿ ತೂಕದ ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದರು.
ಕೈಗೊಳ್ಳಲಾಗಿರುವ ಕ್ರಮಗಳು: ನಗರದ ಎಲ್ಲಾ ವಿಭಾಗಗಳಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಸಿಸಿಬಿ, ನಾಗರಿಕ ಪೊಲೀಸ್, ಸಿಎಆರ್ ಪೊಲೀಸ್, ಶ್ವಾನದಳ, (ಸೋಕೋ) ತಂಡಗಳಿಂದ ಜಂಟಿಯಾಗಿ ಡ್ರಗ್ ಪೆಡ್ಲರ್ಗಳನ್ನು ಪತ್ತೆ ಹಚ್ಚಿ ಬಂಧಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ನಾಕಾಬಂದಿ ಹಾಗೂ ದಿಢೀರ್ ತಪಾಸಣೆಗಳ ಮೂಲಕ ಪೆಡ್ಲರ್ಗಳ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಹೇಳಿದರು.
Laxmi News 24×7