Breaking News

ಹಸುವನ್ನು ಕೊಂದಿದೆ ಎಂಬ ಮಾತ್ರಕ್ಕೆ ವಿಷ ಹಾಕಿ ಹುಲಿಯನ್ನು ಸಾಯಿಸುವುದು ಸರಿಯಲ್ಲ.:C.M.

Spread the love

ಬೆಂಗಳೂರು: ಹಸುವನ್ನು ಕೊಂದಿದೆ ಎಂಬ ಮಾತ್ರಕ್ಕೆ ವಿಷ ಹಾಕಿ ಹುಲಿಯನ್ನು ಸಾಯಿಸುವುದು ಸರಿಯಲ್ಲ. ಅರಣ್ಯ ಸಂಪತ್ತು ನಾಶಪಡಿಸಿ, ವನ್ಯಜೀವಿಗಳನ್ನು ಕೊಲ್ಲಲು ಮುಂದಾದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಪದಕಗಳನ್ನು ವಿತರಿಸಿ ಅವರು ಮಾತನಾಡಿದರು.

ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಹುಲಿ, ಆನೆಗಳ ಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ದ ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ