ಬೆಂಗಳೂರು: ಇತ್ತೀಚೆಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ದಾಳಿ ಮಾಡಿದ ಹಿರಿಯ ವಕೀಲ ರಾಕೇಶ್ ಕಿಶೋರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯ ವಕೀಲ ಭಕ್ತವತ್ಸಲ ಎಂಬುವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಸುಪ್ರೀಂ ಕೋರ್ಟ್ ಹಿರಿಯ ವಕೀಲ ರಾಕೇಶ್ ಕಿಶೋರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅ.6ರಂದು ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲ ರಾಕೇಶ್ ಕಿಶೋರ್ ಏಕಾಏಕಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಕಡೆ ವಸ್ತು ಎಸೆದಿದ್ದರು. ಇದು ಕಾನೂನುಬಾಹಿರ. ಕೂಡಲೇ ರಾಕೇಶ್ ಕಿಶೋರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭಕ್ತವತ್ಸಲ ದೂರಿನಲ್ಲಿ ಕೋರಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದರು.
ವಕೀಲರಿಂದ ಪ್ರತಿಭಟನೆ: ಸಿಜೆಐ ಮೇಲಿನ ದಾಳಿಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ಬೆಂಗಳೂರು ಮತ್ತು ಮೈಸೂರಲ್ಲಿ ವಕೀಲರು ಪ್ರತಿಭಟನೆ ನಡೆಸಿ, ರಾಕೇಶ್ ಕಿಶೋರ್ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇದು ನ್ಯಾಯಾಂಗದ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುವ ಗುರಿಯೊಂದಿಗೆ ನಡೆಸಿರುವ ಅತಿ ದೊಡ್ಡ ಪಿತೂರಿ, ಈ ಕುರಿತು ಸಂಪೂರ್ಣ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ
Laxmi News 24×7